ಯುವ ರಾಜಕುಮಾರ್ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನ
ಯುವ ರಾಜ್‌ಕುಮಾರ್ ನಟನೆಯ ಹೊಸ ಸಿನಿಮಾವನ್ನು ಸಂತೋಷ್ ಆನಂದ್‌ರಾಮ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಿರ್ದೇಶಕರಾಗಲಿ ಅಥವಾ ನಟನಾಗಲಿ ಯಾವುದೇ ಮಾಹಿತಿ ನೀಡಿಲ್ಲ.
Published: 06th April 2022 01:10 PM | Last Updated: 06th April 2022 01:14 PM | A+A A-

ಸಂತೋಷ್ ಆನಂದರಾಮ್ ಮತ್ತು ಯುವ ರಾಜಕುಮಾರ್
ಯುವ ರಾಜ್‌ಕುಮಾರ್ ನಟನೆಯ ಹೊಸ ಸಿನಿಮಾವನ್ನು ಸಂತೋಷ್ ಆನಂದ್‌ರಾಮ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಿರ್ದೇಶಕರಾಗಲಿ ಅಥವಾ ನಟನಾಗಲಿ ಯಾವುದೇ ಮಾಹಿತಿ ನೀಡಿಲ್ಲ.
ಪುನೀತ್ ರಾಜ್‌ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಅವರು ಕಾಂಬಿನೇಷನ್ನಲ್ಲಿ ‘ರಾಜಕುಮಾರ’ ಮತ್ತು ‘ಯುವರತ್ನ’ ಸಿನಿಮಾ ಮೂಡಿಬಂದಿದ್ದವು. ಆ ಎರಡೂ ಸಿನಿಮಾಗಳಿಗೆ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ಬಂಡವಾಳ ಹೂಡಿತ್ತು.
ಅದೇ ಕಾಂಬಿನೇಷನ್ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಬೇಕಿತ್ತು. ಅದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಆಗಿರಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿತ್ತು. ಇನ್ನೇನು ಆ ಚಿತ್ರ ಸೆಟ್ಟೇರಬೇಕು ಅನ್ನೋದಕ್ಕೂ ಮುನ್ನವೇ ಪುನೀತ್ ರಾಜ್‌ಕುಮಾರ್ ನಿಧನರಾದರು.
ಸದ್ಯದಲ್ಲೇ ಚಿತ್ರದ ಫೋಟೋಶೂಟ್ ಕೂಡ ನಡೆಯಲಿದೆ. ಪುನೀತ್ ರಾಜ್‌ಕುಮಾರ್ ಅವರಿಗಾಗಿ ಸಿದ್ಧಪಡಿಸಿದ್ದ ಕಥೆಯನ್ನು ಸ್ವಲ್ಪ ಬದಲಾವಣೆ ಮಾಡಿ, ಆ ಚಿತ್ರಕ್ಕೆ ಯುವ ರಾಜ್‌ಕುಮಾರ್ ಅವರನ್ನು ಹೀರೋ ಆಗಿಸುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ.
ರಾಘವೇಂದ್ರ ರಾಜ್‌ಕುಮಾರ್ ಅವರ ಎರಡನೇ ಪುತ್ರನಾದ ಯುವ ರಾಜ್‌ಕುಮಾರ್ ಅವರು ಈ ಸಿನಿಮಾದಲ್ಲಿ ನಟಿಸಿದರೆ ಸೂಕ್ತ ಎಂಬ ಅಭಿಪ್ರಾಯ ಅಪ್ಪು ಅಭಿಮಾನಿಗಳ ವಲಯದಲ್ಲೂ ಕೇಳಿಬಂದಿದೆ. ಹಾಗಾಗಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ದಟ್ಟವಾಗಿದೆ. ಆ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ನಿರ್ಮಾಣ ಮಾಡಲಿದೆ ಎನ್ನಲಾಗುತ್ತಿದೆ.
ಈ ಬೆಳವಣಿಗೆಗಳ ಕುರಿತಂತೆ ಸಂತೋಷ್ ಆನಂದ್ ರಾಮ್ ಅವರಾಗಲಿ, ಯುವ ರಾಜ್‌ಕುಮಾರ್ ಅವರಾಗಲಿ ಅಥವಾ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯವರಾಗಲಿ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಸದ್ಯಕ್ಕಂತೂ ಇದು ಗಾಂಧಿನಗರದ ಗುಸುಗುಸು ಸುದ್ದಿ ಮಾತ್ರ. ಶೀಘ್ರದಲ್ಲೇ ಈ ಬಗ್ಗೆ ಸೂಕ್ತ ಘೋಷಣೆ ಆದರೆ ಅಭಿಮಾನಿಗಳು ಖುಷಿ ಪಡಲಿದ್ದಾರೆ.
ಇದನ್ನೂ ಓದಿ: ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ ಪುನೀತ್ ರಾಜ್ ಕುಮಾರ್ ಬಯೋಪಿಕ್
ಏ.24ರಂದು ಡಾ. ರಾಜ್‌ಕುಮಾರ್ ಜನ್ಮದಿನ. ಆ ಪ್ರಯಕ್ತ ಹೊಸ ಹೊಸ ಸಿನಿಮಾಗಳು ಅನೌನ್ಸ್ ಆಗಲಿವೆ. ಅದೇ ಸಂದರ್ಭದಲ್ಲೇ ಸಂತೋಷ್ ಆನಂದ್‌ರಾಮ್ ಮತ್ತು ಯುವ ರಾಜ್‌ಕುಮಾರ್ ಕಾಂಬಿನೇಷನ್ನ ಚಿತ್ರದ ಬಗ್ಗೆ ಅಧಿಕೃತ ಮಾಹಿತಿ ಹೊರಬರಲಿದೆ ಎಂದು ಹೇಳಲಾಗುತ್ತಿದೆ.
ಯುವ ರಣಧೀರ ಕಂಠೀರವ’ ಟೈಟಲ್‌ನೊಂದಿಗೆ ಲಾಂಚ್ ಆಗುತ್ತಿರುವ ಯುವ ರಾಜಕುಮಾರ್‌ಗೆ ದೊಡ್ಡಪ್ಪ ಶಿವ ರಾಜಕುಮಾರ್, ಚಿಕ್ಕಪ್ಪ ಪುನೀತ್ ರಾಜಕುಮಾರ್, ತಂದೆ ರಾಘವೇಂದ್ರ ರಾಜಕುಮಾರ್ ಆದಿಯಾಗಿ ಎಲ್ಲರೂ ಹರಸಿದ್ದಾರೆ.
ಎಲ್ಲವೂ ಪ್ಲ್ಯಾನ್ ಪ್ರಕಾರವೇ ನಡೆದಿದ್ದರೆ ಯುವ ರಾಜ್‌ಕುಮಾರ್ ನಟನೆಯ ಮೊದಲ ಸಿನಿಮಾ ‘ಯುವ ರಣಧೀರ ಕಂಠೀರವ’ ಚಿತ್ರ ಸಿದ್ಧವಾಗಿರಬೇಕಿತ್ತು. ಕಾರಣಾಂತರಗಳಿಂದ ಆ ಸಿನಿಮಾ ಕೆಲಸಗಳು ವಿಳಂಬ ಆಗಿವೆ. ಸದ್ಯದ ಮಾಹಿತಿ ಪ್ರಕಾರ ಯುವರಾಜ್‌ಕುಮಾರ್ ಅವರ ಮೊದಲ ಚಿತ್ರ ‘ಯುವ ರಣಧೀರ ಕಂಠೀರವ’ ಸದ್ಯಕ್ಕೆ ಸೆಟ್ಟೇರುವುದಿಲ್ಲ ಎನ್ನಲಾಗುತ್ತಿದೆ.
ಈಗ ಸಂತೋಷ್ ಆನಂದ್‌ರಾಮ್ ಜತೆ ಸಿನಿಮಾ ಮಾಡಲಿದ್ದು, ಮುಂದೆ ಬೇರೆ ಬೇರೆ ನಿರ್ದೇಶಕರ ಚಿತ್ರ ಉಳಿದ ಎರಡು ಚಿತ್ರಗಳನ್ನು ಮಾಡಲಿದ್ದಾರೆ. ಈಗಾಗಲೇ ಹೊಂಬಾಳೆ ಫಿಲಮ್ಸ್ ಮೂರು ಚಿತ್ರಗಳನ್ನು ನಿರ್ಮಿಸುವ ಕುರಿತು ಮಾತುಕತೆ ಆಗಿದೆ. ಅಧಿಕೃತ ಮಾಹಿತಿ ಶೀಘ್ರದಲ್ಲೇ ಬರಲಿದೆ