'ಗಜಾನನ ಅಂಡ್ ಗ್ಯಾಂಗ್' ಬಿಡುಗಡೆ ಫಿಕ್ಸ್: 300 ಥಿಯೇಟರ್ ಗಳಲ್ಲಿ ಅದಿತಿ- ಶ್ರೀ ಜೋಡಿ ಮ್ಯಾಜಿಕ್
‘ನಮ್ ಗಣಿ ಬಿಕಾಂ ಪಾಸ್’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಿರ್ದೇಶಕ, ನಟ ಅಭಿಷೇಕ್ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.
Published: 09th April 2022 03:35 PM | Last Updated: 09th April 2022 03:35 PM | A+A A-

ಸಿನಿಮಾ ಸ್ಟಿಲ್
ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಶ್ರೀಮಹದೇವ್ ಹಾಗೂ ನಟಿ ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ 'ಗಜಾನನ ಅಂಡ್ ಗ್ಯಾಂಗ್' ಸಿನಿಮಾ ಜೂನ್ 3 ರಂದು ಬಿಡುಗಡೆಯಾಗುತ್ತಿದೆ.
ಇದನ್ನೂ ಓದಿ: ಕ್ರೇಜಿಸ್ಟಾರ್ ರವಿಚಂದ್ರನ್ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್
ಈ ಹಿಂದೆ ಫೆಬ್ರವರಿ 4ರಂದು 'ಗಜಾನನ ಅಂಡ್ ಗ್ಯಾಂಗ್' ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ, ಕೊರೋನಾ ಕಾರಣದಿಂದ ಬಿಡುಗಡೆ ಮುಂದೂಡಲ್ಪಟ್ಟಿತ್ತು.
ಇದನ್ನೂ ಓದಿ: ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ 'ಲವ್ ಮಾಕ್ಟೇಲ್ 2': world television premiere
ಗಜಾನನ ಅಂಡ್ ಗ್ಯಾಂಗ್ ಸಿನಿಮಾ ಜೂನ್ 3ರಂದು ರಾಜ್ಯಾದ್ಯಂತ ಬರೋಬ್ಬರಿ 300ಕ್ಕೂ ಥಿಯೇಟರ್ ಗಳಲ್ಲಿ ರಿಲೀಸ್ ಆಗ್ತಿದೆ. ಈ ಬಗ್ಗೆ ಸಿನಿಮಾ ತಂಡ ಅಧಿಕೃತ ಘೋಷಣೆ ಮಾಡಿದೆ.
ಇದನ್ನೂ ಓದಿ: ಆಗಾಗ ನೆನಪಾಗುವ ವಾಸುಕಿ ಸಂಗೀತ ವೈಭವ
‘ನಮ್ ಗಣಿ ಬಿಕಾಂ ಪಾಸ್’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಿರ್ದೇಶಕ, ನಟ ಅಭಿಷೇಕ್ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ನಿರ್ದೇಶನದ ಜತೆಗೆ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಯು ಎಸ್ ನಾಗೇಶ್ ಕುಮಾರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಇದನ್ನೂ ಓದಿ: 'ದಿಯಾ' ನಟ, 'ಲವ್ ಮಾಕ್ಟೇಲ್' ನಟಿ ಸಿನಿಮಾದ ಫರ್ಸ್ಟ್ ಲುಕ್ ಗೆ ಸಿನಿಮಾಸಕ್ತರು ಫಿದಾ
ಪ್ರದ್ಯುತನ್ ಸಂಗೀತ, ಉದಯ ಲೀಲಾ ಕ್ಯಾಮೆರಾ ಚಿತ್ರಕ್ಕಿದೆ. ಬಿಗ್‌ಬಾಸ್ ಖ್ಯಾತಿಯ ರಘು ಗೌಡ, ಚೇತನ್ ದುರ್ಗ, ನಾಟ್ಯರಂಗ, ಅಶ್ವಿನ್ ಹಾಸನ್ ಹಾಗೂ ಶಮಂತ್ ಅಲಿಯಾಸ್ ಬ್ರೋ ಗೌಡ ಚಿತ್ರದಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಮೂಲದ ಸಂಗೀತ ನಿರ್ದೇಶಕ ರಿಕಿ ಕೇಜ್ ಗೆ ಎರಡನೇ ಬಾರಿ ಪ್ರತಿಷ್ಟಿತ ಗ್ರ್ಯಾಮಿ ಪ್ರಶಸ್ತಿ