ಒಟಿಟಿಯಲ್ಲಿ ಬಿಡುಗಡೆಯಾದರೂ ಚಿತ್ರಮಂದಿರಗಳಲ್ಲಿ ಇಂದಿಗೂ ನಿಲ್ಲದ ಕಾಂತಾರ ಅಬ್ಬರ!

ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಿತ್ರ ಸೆಪ್ಟೆಂಬರ್ 30 ರಂದು ರಾಜ್ಯದಾದ್ಯಂತ ಬಿಡುಗಡೆಯಾಯಿತು. ಈ ಚಿತ್ರ ಬಿಡುಗಡೆಯಾಗಿ 10ನೇ ವಾರಕ್ಕೆ ಕಾಲಿಡುತ್ತಿದ್ದರೂ ಕಾಂತಾರ ಕ್ರೇಜ್ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಚಿತ್ರಮಂದಿರಗಳಲ್ಲಿ ಚಿತ್ರದ ಅಬ್ಬರ ಕೊಂಚವು ಕಡಿಮೆಯಾಗಿಲ್ಲ.
ಕಾಂತಾರ ಸಿನಿಮಾ ಸ್ಟಿಲ್
ಕಾಂತಾರ ಸಿನಿಮಾ ಸ್ಟಿಲ್

ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಿತ್ರ ಸೆಪ್ಟೆಂಬರ್ 30 ರಂದು ರಾಜ್ಯದಾದ್ಯಂತ ಬಿಡುಗಡೆಯಾಯಿತು. ಚಿತ್ರ ಬಿಡುಗಡೆಯಾಗಿ 10ನೇ ವಾರಕ್ಕೆ ಕಾಲಿಡುತ್ತಿದ್ದರೂ ಕಾಂತಾರ ಕ್ರೇಜ್ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಚಿತ್ರಮಂದಿರಗಳಲ್ಲಿ ಚಿತ್ರದ ಅಬ್ಬರ ಕೊಂಚವು ಕಡಿಮೆಯಾಗಿಲ್ಲ.

ಕನ್ನಡ ಭಾಷೆಯಲ್ಲಿ ಯಶಸ್ಸು ಗಳಿಸುತ್ತಿದ್ದಂತೆಯೇ ನಿರ್ಮಾಪಕರು ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿಯೂ ಕಾಂತಾರವನ್ನು ಬಿಡುಗಡೆ ಮಾಡಿದರು. ಇದೀಗ ತುಳು ಆವೃತ್ತಿಯು ಕೂಡ ಡಿಸೆಂಬರ್ 2 ರಂದು ಕರ್ನಾಟಕದಾದ್ಯಂತ ಸುಮಾರು 50 ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ ಕನ್ನಡ ಆವೃತ್ತಿಯಲ್ಲಿಯೂ 50 ಹೆಚ್ಚುವರಿ ಚಿತ್ರಮಂದಿರಗಳೊಂದಿಗೆ 250 ಥಿಯೇಟರ್‌ಗಳಲ್ಲಿ ಪ್ರದರ್ಶನ ಕಾಣಲಿದೆ.

ಬಹು ಭಾಷೆಗಳಲ್ಲಿ ಬಿಡುಗಡೆಯಾದ ಕಾಂತಾರ ಅಲ್ಲಿಯೂ ಭರ್ಜರಿ ಯಶಸ್ಸನ್ನು ಪಡೆಯಿತು. ಗಲ್ಲಾಪೆಟ್ಟಿಗೆಯಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ಸಿನಿಮಾ ಇದೀಗ ಒಟಿಟಿ ವೇದಿಕೆಯಲ್ಲಿಯೂ ಬಿಡುಗಡೆಯಾಗಿದೆ. ಹೀಗಿದ್ದರೂ, ಕಾಂತಾರ ಕ್ರೇಜ್ ಇನ್ನು ಕಡಿಮೆಯಾಗಿಲ್ಲ. ಚಿತ್ರಮಂದಿರಗಳಿಗೆ ಬರುತ್ತಿರುವ ಜನ ಇಂದಿಗೂ ಸಿನಿಮಾ ವೀಕ್ಷಿಸುತ್ತಿದ್ದಾರೆ.

ಸಿನಿಮಾದಲ್ಲಿನ ವರಾಹ ರೂಪಂ ಹಾಡನ್ನು ಥಿಯೇಟರ್ ಮತ್ತು ಒಟಿಟಿ ಆವೃತ್ತಿಯಲ್ಲಿ ಬದಲಿಸಲಾಗಿದೆ. ನಾಯಕನಾಗಿ ನಟಿಸುವುದರ ಹೊರತಾಗಿ, ರಿಷಬ್ ಶೆಟ್ಟಿ ಕಾಂತಾರ ಕಥೆಯನ್ನು ಬರೆದು ನಿರ್ದೇಶಿಸಿದ್ದಾರೆ.

ಈ ಕಥೆಯು ಜಮೀನು ಅತಿಕ್ರಮಣದ ಸುತ್ತಲಿನ ಗ್ರಾಮಸ್ಥರು ಮತ್ತು ಅರಣ್ಯ ಅಧಿಕಾರಿಗಳ ನಡುವಿನ ಹೋರಾಟವನ್ನು ತೋರಿಸುತ್ತದೆ.

ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ ಮತ್ತು ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಪ್ರಸಾದ್ ತೂಮಿನಾಡ್, ಸ್ವರಾಜ್ ಶೆಟ್ಟಿ ಮತ್ತು ಮಾನಸಿ ಸುಧೀರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com