ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸುತ್ತೇನೆ ಆದರೆ... ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್
'ದಿ ಕಾಶ್ಮೀರ್ ಫೈಲ್ಸ್" ಕುರಿತು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದರೆ ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸುವುದಾಗಿ ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಹೇಳಿದ್ದಾರೆ. ಕಾಶ್ಮೀರಿ ಪಂಡಿತ ಸಮುದಾಯವನ್ನು ಅಥವಾ ನೋವನ್ನು ಅನುಭವಿಸಿದವರನ್ನು ಅವಮಾನಿಸುವುದು ತನ್ನ ಉದ್ದೇಶವಲ್ಲ ಎಂದಿದ್ದಾರೆ.
Published: 01st December 2022 06:01 PM | Last Updated: 16th December 2022 12:21 PM | A+A A-

ಇಸ್ರೇಲಿ ಚಿತ್ರ ನಿರ್ದೇಶಕ ನಡಾವ್ ಲ್ಯಾಪಿಡ್
ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್" ಕುರಿತು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದರೆ ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸುವುದಾಗಿ ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಹೇಳಿದ್ದಾರೆ. ಕಾಶ್ಮೀರಿ ಪಂಡಿತ ಸಮುದಾಯವನ್ನು ಅಥವಾ ನೋವು ಅನುಭವಿಸಿದವರನ್ನು ಅವಮಾನಿಸುವುದು ತನ್ನ ಉದ್ದೇಶವಲ್ಲ ಎಂದಿದ್ದಾರೆ.
ಇತ್ತೀಚಿಗೆ ಗೋವಾದಲ್ಲಿ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತೀರ್ಪುಗಾರರ ಅಧ್ಯಕ್ಷರಾಗಿದ್ದ ಲ್ಯಾಪಿಡ್, ದಿ ಕಾಶ್ಮೀರ್ ಫೈಲ್ಸ್ ಅಸಭ್ಯ, ಕೀಳು ಅಭಿರುಚಿಯದ್ದು ಎಂದು ಹೇಳುವ ಮೂಲಕ ಭಾರಿ ವಿವಾದವನ್ನು ಹುಟ್ಟುಹಾಕಿದ್ದರು.
'ಯಾರನ್ನೂ ನೋವಿಸಲು ನಾನು ಬಯಸಲ್ಲ, ಸಂಕಷ್ಟದಲ್ಲಿರುವ ಜನರು, ಅವರ ಸಂಬಂಧಿಕರನ್ನು ನೋಯಿಸುವುದು ನನ್ನ ಗುರಿಯಲ್ಲ, ಇದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದರೆ ಸಂಪೂರ್ಣವಾಗಿ ಕ್ಷಮೆಯಾಚಿಸುತ್ತೇನೆ ಎಂದು ಲ್ಯಾಪಿಡ್ ಹೇಳಿದ್ದಾರೆ.
ಇದನ್ನೂ ಓದಿ: ಸಿನಿಮಾ ಮಾಡೋದನ್ನೇ ಬಿಡುತ್ತೇನೆ, ಆದರೆ.... : ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೀಗೆ ಹೇಳಿದ್ದೇಕೆ...?
ಇದೇ ಸಮಯದಲ್ಲಿ ನನಗಾಗಿ ಮತ್ತು ಕೆಲ ಜ್ಯೂರಿ ಸದಸ್ಯರಿಗೆ ಏನು ಹೇಳಬೇಕೊ ಅದನ್ನು ಸ್ಪಷ್ಟವಾಗಿ ಹೇಳಿದ್ದೇನೆ. ಇದು ಅಸಭ್ಯ ಪ್ರಚಾರದ ಚಲನಚಿತ್ರವಾಗಿದ್ದು, ಅಂತಹ ಪ್ರತಿಷ್ಠಿತ ಸ್ಪರ್ಧಾತ್ಮಕ ವಿಭಾಗಕ್ಕೆ ಯೋಗ್ಯವಲ್ಲ ಎಂಬುದನ್ನು ಪದೇ ಪದೇ ಹೇಳಬಹುದು ಎಂದಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಬರೆದು ನಿರ್ದೇಶಿಸಿದ "ದಿ ಕಾಶ್ಮೀರ್ ಫೈಲ್ಸ್" ಭಾರತೀಯ ಪನೋರಮಾ ವಿಭಾಗದಿಂದ ನವೆಂಬರ್ 22 ರಂದು ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು.