'ಕ್ಯಾಪ್ಟನ್ ಮಿಲ್ಲರ್' ಚಿತ್ರದಲ್ಲಿ ನಟ ಧನುಷ್ ಅಣ್ಣನ ಪಾತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್
ಅರುಣ್ ಮಾಥೇಶ್ವರನ್ ನಿರ್ದೇಶನದ ಧನುಷ್ ಅವರ ಮುಂಬರುವ ಚಿತ್ರ ಕ್ಯಾಪ್ಟನ್ ಮಿಲ್ಲರ್‌ನಲ್ಲಿ ಕನ್ನಡದ ನಟ ಶಿವರಾಜ್‌ಕುಮಾರ್ ಅವರು ಅಭಿನಯಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ನಿರ್ಮಾಪಕರ ಕಡೆಯಿಂದ ಅಧಿಕೃತ ದೃಢೀಕರಣವಿಲ್ಲವಾದರೂ, ಕನ್ನಡದ ಹಿರಿಯ ನಟ ಇತ್ತೀಚೆಗೆ ಚಿತ್ರದಲ್ಲಿ ತಾವು ನಟಿಸುವುದಾಗಿ ಖಚಿತಪಡಿಸಿದ್ದಾರೆ.
Published: 05th December 2022 02:02 PM | Last Updated: 05th December 2022 08:21 PM | A+A A-

ನಟ ಶಿವರಾಜ್‌ಕುಮಾರ್
ಅರುಣ್ ಮಾಥೇಶ್ವರನ್ ನಿರ್ದೇಶನದ ಧನುಷ್ ಅವರ ಮುಂಬರುವ ಚಿತ್ರ ಕ್ಯಾಪ್ಟನ್ ಮಿಲ್ಲರ್‌ನಲ್ಲಿ ಕನ್ನಡದ ನಟ ಶಿವರಾಜ್‌ಕುಮಾರ್ ಅವರು ಅಭಿನಯಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ನಿರ್ಮಾಪಕರ ಕಡೆಯಿಂದ ಅಧಿಕೃತ ದೃಢೀಕರಣವಿಲ್ಲವಾದರೂ, ಕನ್ನಡದ ಹಿರಿಯ ನಟ ಇತ್ತೀಚೆಗೆ ಚಿತ್ರದಲ್ಲಿ ತಾವು ನಟಿಸುವುದಾಗಿ ಖಚಿತಪಡಿಸಿದ್ದಾರೆ.
ಇತ್ತೀಚಿನ ಮಾಧ್ಯಮ ಸಂವಾದದ ಸಂದರ್ಭದಲ್ಲಿ ಶಿವರಾಜಕುಮಾರ್ ಅವರು, ಚಿತ್ರದಲ್ಲಿ ತಾನು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ನಟ ಧನುಷ್ ಅವರ ಅಣ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವುದಾಗಿ ಹೇಳಿದರು.

ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೆ ಸತ್ಯಜ್ಯೋತಿ ಫಿಲ್ಮ್ಸ್ ಬಂಡವಾಳ ಹೂಡಿದ್ದು, ಸಂದೀಪ್ ಕಿಶನ್ ಮತ್ತು ಪ್ರಿಯಾಂಕಾ ಅರುಲ್ ಮೋಹನ್ ಕೂಡ ಇದ್ದಾರೆ.
ಇದನ್ನೂ ಓದಿ: ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ನಲ್ಲಿ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್?
ಕ್ಯಾಪ್ಟನ್ ಮಿಲ್ಲರ್ ಸ್ವಾತಂತ್ರ್ಯ ಪೂರ್ವದ ಕಥೆಯಾಗಿದ್ದು, ಶ್ರೇಯಸ್ ಕೃಷ್ಣ ಅವರ ಛಾಯಾಗ್ರಹಣವಿದ್ದು, ಜಿವಿ ಪ್ರಕಾಶ್ ಕುಮಾರ್ ಅವರು ಸಂಗೀತ ಸಂಯೋಜಿಸಿದ್ದಾರೆ ಮತ್ತು ನಾಗೂರನ್ ಸಂಕಲನದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.
ವಿಶೇಷ ಎಂದರೆ, ರಜನಿಕಾಂತ್-ನೆಲ್ಸನ್ ಅವರ ಮುಂಬರುವ ಚಿತ್ರ ಜೈಲರ್‌ನಲ್ಲಿ ಕೂಡ ಶಿವರಾಜ್‌ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.