ಹರಿಪ್ರಿಯಾ- ವಸಿಷ್ಠ ಸಿಂಹ ಪ್ರೇಮಾಂಕುರಕ್ಕೆ ಕಾರಣ 'ಕ್ರಿಸ್ಟಲ್': ತಮ್ಮ ಪ್ರೀತಿ ಚಿಗುರೊಡೆದ ಅಸಲಿ ಕಹಾನಿ ಬಿಚ್ಚಿಟ್ಟ 'ಉಗ್ರಂ' ನಟಿ!

ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಅವರು ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದು ಕೇವಲ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿದೆ. ಇಬ್ಬರ ನಡುವಿನ ಪ್ರೀತಿ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ.
ವಸಿಷ್ಠ ಸಿಂಹ ಮತ್ತು ಹರಿ ಪ್ರಿಯಾ
ವಸಿಷ್ಠ ಸಿಂಹ ಮತ್ತು ಹರಿ ಪ್ರಿಯಾ

ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಅವರು ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದು ಕೇವಲ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿದೆ. ಇಬ್ಬರ ನಡುವಿನ ಪ್ರೀತಿ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ. ಹರಿಪ್ರಿಯಾ ಅವರ ಮೂಗು ಚುಚ್ಚವ ಶಾಸ್ತ್ರದ ವಿಡಿಯೋ ವೈರಲ್​ ಆದ ನಂತರವಷ್ಟೇ ಇವರ ಲವ್​ ಸ್ಟೋರಿ ಹೊರಬಂತು.

ಯಾವುದೇ ಸುಳಿವು ಕೊಡದೇ ಏಕಾಏಕಿಯಾಗಿ ಇಂಥದ್ದೊಂದು ಸುದ್ದಿ ಕೊಟ್ಟ ತಾರೆಯರು, ಭೇಟಿಯಾಗಿದ್ದು ಎಲ್ಲಿ? ಪ್ರೇಮ ಶುರುವಾಗಿದ್ದು ಯಾವಾಗ? ಮೊದಲು ಪ್ರಪೋಸ್ ಮಾಡಿದ್ದು ಯಾರು ಇತ್ಯಾದಿ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿವೆ. ಇವರಿಬ್ಬರೂ ಪರಸ್ಪರ ಪ್ರೇಮಿಸೋಕೆ ಶುರು ಮಾಡಿದ್ದು ತೆಲುಗು ಸಿನಿಮಾವೊಂದರಿಂದ ಎಂದು ಹೇಳಲಾಗಿತ್ತು.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಡುವೆ ಪ್ರೀತಿ ಶುರುವಾಗಲು ಕಾರಣ ಆಗಿದ್ದು ಒಂದು ನಾಯಿಮರಿ, ಈ ವಿಚಾರವನ್ನು ಸ್ವತಃ ಹರಿಪ್ರಿಯಾ ಬಯಲು ಮಾಡಿದ್ದಾರೆ. ತಮ್ಮ ಲವ್​ ಶುರುವಾಗಿದ್ದು ಹೇಗೆ ಎಂಬುದನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ವಸಿಷ್ಠ ಸಿಂಹ ನೀಡಿದ ನಾಯಿಮರಿಯಿಂದ ಇವರ ಪ್ರೇಮ್​ ಕಹಾನಿ ಶುರುವಾಯಿತು. ಆ ಶ್ವಾನದ ಹೆಸರು ಕ್ರಿಸ್ಟಲ್​.

ಹರಿಪ್ರಿಯಾ ಅವರು ಲಕ್ಕಿ ಮತ್ತು ಹ್ಯಾಪಿ ಎಂಬ ನಾಯಿಗಳನ್ನು ಸಾಕಿದ್ದರು. ಆದರೆ ಲಕ್ಕಿ ಸತ್ತ ನಂತರ ಹ್ಯಾಪಿ ಒಂಟಿಯಾಯ್ತು. ಹರಿಪ್ರಿಯಾ ಕೂಡ ಲಕ್ಕಿಯನ್ನು ಮಿಸ್​ ಮಾಡಿಕೊಳ್ಳುತ್ತಿದ್ದರು. ಆ ಸಂದರ್ಭದಲ್ಲಿ ವಸಿಷ್ಠ ಸಿಂಹ ಅವರು ಕ್ರಿಸ್ಟಲ್​ ಎಂಬ ನಾಯಿಮರಿಯನ್ನು ಹರಿಪ್ರಿಯಾಗೆ ನೀಡಿದರು.

‘ಹ್ಯಾಪಿ ಮತ್ತು ಕ್ರಿಸ್ಟಲ್​ ನಡುವೆ ಸ್ನೇಹ ಬೆಳೆಯಲು ಸ್ವಲ್ಪ ಸಮಯ ಹಿಡಿಯಿತು. ಕ್ರಿಸ್ಟಲ್​ ಯಾವಾಗಲೂ ಹ್ಯಾಪಿಯ ವಸ್ತುಗಳ ಜೊತೆ ಆಟ ಆಡ್ತಿದ್ದ. ಅದರಿಂದ ಹ್ಯಾಪಿಗೆ ಸಿಟ್ಟು ಬರ್ತಿತ್ತು. ಕ್ರಿಸ್ಟಲ್​ ಮೋಡಿ ಮಾಡ್ತಾನೆ. ಯಾರನ್ನು ಬೇಕಾದ್ರೂ ಬೇಗ ಫ್ರೆಂಡ್​ ಮಾಡಿಕೊಳ್ತಾನೆ. ಹ್ಯಾಪಿ ಜೊತೆಗೂ ಫ್ರೆಂಡ್​ಶಿಪ್​ ಬೆಳೆಸಿಕೊಂಡ. ಈಗ ಅವರಿಬ್ಬರೂ ಜೊತೆಯಲ್ಲೇ ಇರ್ತಾರೆ’ ಎಂದು ಹರಿಪ್ರಿಯಾ ಹೇಳಿದ್ದಾರೆ.

‘ಇವತ್ತು ನಿಮಗೊಂದು ಸೀಕ್ರೆಟ್​ ಹೇಳ್ತೀನಿ. ವಸಿಷ್ಠ ಈ ನಾಯಿಯನ್ನು ಗಿಫ್ಟ್​ ಮಾಡಿದಾಗ ಇವನು ಒಂದು ಮೆಸೇಜ್​ ತಂದಿದ್ದಾನೆ ಎಂಬುದು ಗೊತ್ತಿರಲಿಲ್ಲ. ಅವನ ಹೊಟ್ಟೆಯಲ್ಲಿ ಹಾರ್ಟ್​ ಶೇಪ್​ನ ಒಂದು ಬರ್ತ್​ ಮಾರ್ಕ್​ ಇದೆ. ಅವನು ಬೆಳೆಯುತ್ತಾ ಬೆಳೆಯುತ್ತಾ ನಮ್ಮ ಪ್ರೀತಿ ಕೂಡ ಬೆಳೆಯಿತು. ಕ್ರಿಸ್ಟಲ್​ ನಮ್ಮಿಬ್ಬರ ಪ್ರೀತಿಗೆ ಕನ್ನಡಿ ಹಿಡಿದಿದ್ದಾನೆ’ ಎಂದಿದ್ದಾರೆ ಹರಿಪ್ರಿಯಾ.

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ತೆಲುಗಿನ ‘ಎವರು’ ರಿಮೇಕ್  ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಇನ್ನೂ ಬಿಡುಗಡೆ ಆಗಬೇಕಿದೆ. ಈ ಸಿನಿಮಾದಲ್ಲೇ ಇವರಿಬ್ಬರೂ ಪರಸ್ಪರ  ಅರ್ಥ ಮಾಡಿಕೊಂಡರು ಎಂದು ಹೇಳಲಾಗಿತ್ತು. ಅಲ್ಲದೇ, ಗೆಳೆತನ ಗಟ್ಟಿಯಾಗಿ ಆ ನಂತರವಷ್ಟೇ ಮದುವೆ ಆಗುವ ನಿರ್ಧಾರವನ್ನು ತಗೆದುಕೊಂಡಿದ್ದಾರೆ ಎನ್ನುತ್ತಾರೆ ಆಪ್ತರು. ಮದುವೆ ಕುರಿತಾಗಿ ಇಷ್ಟೊಂದು ಸುದ್ದಿಯಾದರೂ, ವಸಿಷ್ಠ ಆಗಲಿ ಅಥವಾ ಹರಿಪ್ರಿಯಾ ಆಗಲಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com