ರಮ್ಯಾ ನಿರ್ಮಾಣದ ಚಿತ್ರಕ್ಕೆ 'ಟೈಟಲ್ ವಿವಾದ': ವಾಣಿಜ್ಯ ಮಂಡಳಿಗೆ ರಾಜೇಂದ್ರ ಸಿಂಗ್ ಬಾಬು ದೂರು

ಬಹುವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ನಟಿ ರಮ್ಯಾ ಇದೀಗ ನಿರ್ಮಾಣದ ಮೂಲಕ ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ಆಪಲ್ ಬಾಕ್ಸ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿರುವ ರಮ್ಯ ಅವರು ರಾಜ್ ಬಿ ಶೆಟ್ಟಿ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
ರಾಜೇಂದ್ರ ಸಿಂಗ್ ಬಾಬು-ರಮ್ಯಾ
ರಾಜೇಂದ್ರ ಸಿಂಗ್ ಬಾಬು-ರಮ್ಯಾ

ಬಹುವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ನಟಿ ರಮ್ಯಾ ಇದೀಗ ನಿರ್ಮಾಣದ ಮೂಲಕ ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ಆಪಲ್ ಬಾಕ್ಸ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿರುವ ರಮ್ಯ ಅವರು ರಾಜ್ ಬಿ ಶೆಟ್ಟಿ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಆದರೆ ಈಗ ಚಿತ್ರಕ್ಕೆ ಶೀರ್ಷಿಕೆ ವಿವಾದ ಎದುರಾಗಿದೆ. 

ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದೆ. ಆದರೆ ಇದೀಗ ಸ್ವಾತಿ ಮುತ್ತಿನ ಮಳೆ ಹನಿಯೇ ಶೀರ್ಷಿಕೆ ಬಳಸದಂತೆ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಆಕ್ಷೇಪ ಎತ್ತಿದ್ದಾರೆ. ಅಲ್ಲದೆ ಈ ಕುರಿತಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. 

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಶೀರ್ಷಿಕೆಯನ್ನು ತಾವು ನೊಂದಾಯಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ. ನಟ ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುಹಾಸಿನಿ ಈ ಚಿತ್ರದಲ್ಲಿ ನಟಿಸಿದ್ದು ಶೇಕಡ 80ರಷ್ಟು ಚಿತ್ರೀಕರಣವೂ ಮುಗಿದಿತ್ತು. ಆದರೆ ಅಂಬರೀಶ್ ಅವರ ನಿಧನದಿಂದಾಗಿ ಚಿತ್ರೀಕರಣ ನಿಂತಿತ್ತು ಎಂದು ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ.

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದಲ್ಲಿ ಮೊದಲಿಗೆ ರಮ್ಯ ನಟಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ನಟಿಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ. ಇನ್ನು ಶೀರ್ಷಿಕೆ ವಿವಾದ ಕುರಿತಂತೆ ರಮ್ಯಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. 

1990ರಲ್ಲಿ ರವಿಚಂದ್ರನ್ ಅಭಿನಯದ ಬಣ್ಣದ ಗೆಜ್ಜೆ ಚಿತ್ರ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಸ್ವಾತಿ ಮುತ್ತಿನ ಮಳೆ ಹನಿಯೇ ಎಂಬ ಬ್ಲಾಕ್ ಬಸ್ಟರ್ ಹಾಡಿದೆ. ಇದನ್ನೇ ಶೀರ್ಷಿಕೆಯಾಗಿ ರಾಜೇಂದ್ರ ಸಿಂಗ್ ಬಾಬು ಅವರು ನೊಂದಾಯಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com