ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆತ; ವಿಡಿಯೋ ವೈರಲ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು ಚಿತ್ರದ ಪ್ರಚಾರದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇನ್ನು ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ದರ್ಶನ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದಾರೆ.
ಪ್ರತ್ಯಕ್ಷ ದೃಶ್ಯ

ಕಾಂತ್ರಿ ಚಿತ್ರದ ಎರಡನೇ ಹಾಡು ಬೊಂಬೆ ಬೊಂಬೆಯನ್ನು ಬಳ್ಳಾರಿಯ ಹೊಸಪೇಟೆ ಪಟ್ಟಣದ ಡ್ಯಾಮ್ ರಸ್ತೆಯಲ್ಲಿರುವ ವಾಲ್ಮೀಕಿ ವೃತ್ಥದಲ್ಲಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಹೊಸಪೇಟೆಯಲ್ಲಿ ಪುನೀತ್ ರಾಜಕುಮಾರ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ವಾರ್ ಶುರುವಾಗಿತ್ತು. 

ಕಾಂತ್ರಿ ಚಿತ್ರದ ಪೋಸ್ಟರ್ ಗಳನ್ನು ಅಪ್ಪು ಅಭಿಮಾನಿಗಳು ಹರಿದುಹಾಕಿದ್ದರು. ಅಲ್ಲದೆ ಅಪ್ಪು ಕಟ್ ಔಟ್ ಹಿಡಿದು ಅಪ್ಪುಗೆ ಜೈಕಾರ ಹಾಕಿ ವೇದಿಕೆ ಏರಿದ್ದರು. ಈ ವೇಳೆ ದರ್ಶನ್ ಅಪ್ಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಕಾರ್ಯಕ್ರಮ ಶುರುವಾಯಿತು. 

ವೇದಿಕೆ ಮೇಲೆ ರಚಿತಾ ರಾಮ್ ಚಿತ್ರದ ಕುರಿತು ಮಾತನಾಡುತ್ತಿದ್ದಾಗ ಯಾರೋ ಕಿಡಿಗೇಡಿ ದರ್ಶನ್ ಮೇಲೆ ಚಪ್ಪಲಿ ಎಸೆದಿದ್ದಾನೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com