'ಪದವಿ ಪೂರ್ವ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ನಟ ಅಭಿಷೇಕ್ ಅಂಬರೀಶ್
ಹಾಡುಗಳ ಮೂಲಕ ಈಗಾಗಲೇ ಗಮನ ಸೆಳೆದಿರುವ ಪದವಿ ಪೂರ್ವ ಸಿನಿಮಾದ ಟ್ರೈಲರ್ ಡಿ.21ರಂದು ಬಿಡುಗಡೆಯಾಗಲಿದ್ದು, ನಟ ಅಭಿಷೇಕ್ ಅಂಬರೀಶ್ ಅವರು ಬಿಡುಗಡೆ ಮಾಡಲಿದ್ದಾರೆ.
Published: 20th December 2022 01:40 PM | Last Updated: 20th December 2022 01:40 PM | A+A A-

ಪದವಿ ಪೂರ್ವ ಸಿನಿಮಾ ಸ್ಟಿಲ್
ಬೆಂಗಳೂರು: ಹಾಡುಗಳ ಮೂಲಕ ಈಗಾಗಲೇ ಗಮನ ಸೆಳೆದಿರುವ ಪದವಿ ಪೂರ್ವ ಸಿನಿಮಾದ ಟ್ರೈಲರ್ ಡಿ.21ರಂದು ಬಿಡುಗಡೆಯಾಗಲಿದ್ದು, ನಟ ಅಭಿಷೇಕ್ ಅಂಬರೀಶ್ ಅವರು ಬಿಡುಗಡೆ ಮಾಡಲಿದ್ದಾರೆ.
ಚಿತ್ರದ ಮೊದಲ ಹಾಡನ್ನು ನವರಸನಾಯಕ ಜಗ್ಗೇಶ್ ಅವರು ಬಿಡುಗಡೆ ಮಾಡಿದ್ದರೆ, ಎರಡನೇ ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದರು. ಇದೀಗ ಚಿತ್ರದ ಟ್ರೈಲರ್ ಅನ್ನು ಅಭಿಷೇಕ್ ಅಂಬರೀಶ್ ಬಿಡುಗಡೆ ಮಾಡಲಿದ್ದಾರೆ.
.#AbishekAmbareesh will be releasing the trailer of @HarryJasp #PadaviPoorva on #Dec21 at #7pm A college drama backed by @yogarajofficial and #RaviShamanur starring #PrithviShamanur #AnjaliAnish @YashaShivakumar to release on #Dec30 pic.twitter.com/CgxcDG3L3k
— A Sharadhaa (@sharadasrinidhi) December 20, 2022
ಡಿಸೆಂಬರ್ ವಾರಾಂತ್ಯ ಸಿನಿಮಾ ಬಿಡುಗಡೆಗೆ ಲಕ್ಕಿವೀಕ್ ಎನ್ನುವ ಮಾತು ಗಾಂಧಿನಗರದಲ್ಲಿದೆ. ಅದರಂತೆ ಈಗಾಗಲೇ ಸಿನಿಮಾ ಬಿಡುಗಡೆಗೆ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿರುವ ಪದವಿ ಪೂರ್ವ ಸಿನಿಮಾ ಒಂದಿಲ್ಲೊಂದು ಕಾರಣಗಳಿಗಾಗಿ ಸ್ಯಾಂಡಲ್‌ವುಡ್‌ನಲ್ಲಿ ಗಮನಸೆಳೆದಿದೆ.

ಯೋಗರಾಜ್ ಭಟ್ ಅವರ ನಿರ್ಮಾಣ ಸಂಸ್ಥೆ ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರ್ ಫಿಲಂಸ್ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ಯೂಥ್‌ಫುಲ್ ಲವ್ ಸ್ಟೋರಿ ‘ಪದವಿ ಪೂರ್ವ’ ಡಿಸೆಂಬರ್ 30ಕ್ಕೆ ಬಿಡುಗಡೆಯಾಗಲಿದೆ.
ಇದೇ ಮೊದಲ ಬಾರಿಗೆ ಹರಿಪ್ರಸಾದ್ ಜಯಣ್ಣ ಅವರು ನಿರ್ದೇಶಕರ ಕ್ಯಾಪ್ ತೊಟ್ಟು ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ರಂಗಾಯಣ ರಘು, ‘ರಾಮಾರಾಮಾರೇ’ ಖ್ಯಾತಿಯ ನಟರಾಜ್ ಭಟ್ ತಾರಾಗಣದಲ್ಲಿದ್ದು, ಯೋಗರಾಜ್ ಭಟ್, ನಟಿ ಅದಿತಿ ಪ್ರಭುದೇವ, ದಿವ್ಯ ಉರುಡುಗ, ‘ಕಾಮಿಡಿ ಕಿಲಾಡಿ’ ನಯನ, ಶ್ರೀ ಮಹದೇವ್ ಅತಿಥಿ ಪಾತ್ರದಲ್ಲಿದ್ದಾರೆ.
‘ಪದವಿಪೂರ್ವ’ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿದ್ದು, ಯೋಗರಾಜ್ ಭಟ್ ಸಾಹಿತ್ಯವಿದೆ. ಛಾಯಾಗ್ರಾಹಕ ಸಂತೋಷ್ ರೈ ಪತಾಜೆ ಛಾಯಾಗ್ರಹಣ, ಮಧು ತುಂಬಕೆರೆಯ ಸಂಕಲನ ಚಿತ್ರಕ್ಕಿದೆ.