ನಟ ದರ್ಶನ್ ಮೇಲೆ ಶೂ ಎಸೆತ ಪ್ರಕರಣ: ಮೂವರು ನ್ಯಾಯಾಂಗ ಬಂಧನಕ್ಕೆ
ಹೊಸಪೇಟೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 18 ರಂದು ಹೊಸಪೇಟೆಯ ವಾಲ್ಮೀಕಿ ವೃತ್ತದಲ್ಲಿ ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ ಲಿರಿಕಲ್ ಹಾಡು ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಮೇಲೆ ಶೂ ಎಸೆದು, ಅವರ ಪೋಸ
Published: 26th December 2022 12:17 AM | Last Updated: 26th December 2022 12:23 AM | A+A A-

ನಟ ದರ್ಶನ್ ಮೇಲೆ ಶೂ ಎಸೆತದ ಚಿತ್ರ
ಹೊಸಪೇಟೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 18 ರಂದು ಹೊಸಪೇಟೆಯ ವಾಲ್ಮೀಕಿ ವೃತ್ತದಲ್ಲಿ ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ ಲಿರಿಕಲ್ ಹಾಡು ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಮೇಲೆ ಶೂ ಎಸೆದು, ಅವರ ಪೋಸ್ಟರ್ ಬ್ಯಾನರ್ ಹರಿಯಲಾಗಿತ್ತು.
ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆತ; ವಿಡಿಯೋ ವೈರಲ್!
ಇದು ಅಪ್ಪು ಅಭಿಮಾನಿಗಳು ಮಾಡಿದ ಕೆಲಸ ಎಂದು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುತ್ತಿದ್ದರು. ಈ ವಿಚಾರದಲ್ಲಿ ಇಬ್ಬರೂ ಸ್ಟಾರ್ ನಟರ ಅಭಿಮಾನಿಗಳ ನಡುವೆ ಆರೋಪ, ಪ್ರತ್ಯಾರೋಪ, ಟೀಕೆಗಳು ಜೋರಾಗಿ ಈಗಲೂ ನಡೆಯುತ್ತಲೇ ಇದೆ.
ಈ ನಡುವೆ ಆಯೋಜಕರು ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಈ ತಂಡ ಘಟನೆ ಸಂಬಂಧ ಮೂವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದವರಿಗಾಗಿ ಹುಡುಕಾಟ ನಡೆದಿದೆ ಎಂದು ಎಸ್ ಪಿ ಬಿ.ಎಲ್. ಶ್ರೀಹರಿಬಾಬು ತಿಳಿಸಿದ್ದಾರೆ.