ನಟ ಪುನೀತ್ ನಿವಾಸಕ್ಕೆ ಅಲ್ಲು ಅರ್ಜುನ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ
ತೆಲುಗಿನ ಖ್ಯಾತ ನಟ ಅಲ್ಲು (Allu Arjun) ಅರ್ಜುನ್ ಇಂದು ಗುರುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ ಪುನೀತ್ ರಾಜ್ ಕುಮಾರ್ (Puneet Rajkumar) ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
Published: 03rd February 2022 02:06 PM | Last Updated: 03rd February 2022 02:55 PM | A+A A-

ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದ ಸಂದರ್ಭ
ಬೆಂಗಳೂರು: ತೆಲುಗಿನ ಖ್ಯಾತ ನಟ ಅಲ್ಲು (Allu Arjun) ಅರ್ಜುನ್ ಇಂದು ಗುರುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ ಪುನೀತ್ ರಾಜ್ ಕುಮಾರ್ (Puneet Rajkumar) ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಅಲ್ಲು ಅರ್ಜುನ್ ಅವರ ಇತ್ತೀಚಿನ ಚಿತ್ರ ಪುಷ್ಪ (Pushpa) ಬಿಡುಗಡೆಯಾಗಿ ಭರ್ಜರಿ ಹಿಟ್ ಆಗಿದೆ. ಡಿಸೆಂಬರ್ ನಲ್ಲಿ ಬೆಂಗಳೂರಿಗೆ ಚಿತ್ರದ ಪ್ರಚಾರಕ್ಕೆ ಬಂದಿದ್ದ ವೇಳೆ ಇನ್ನೊಂದು ದಿನ ಬಂದು ನಟ ಪುನೀತ್ ನಿವಾಸಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದರು.
ಅದರಂತೆ ಇಂದು ಬೆಂಗಳೂರಿಗೆ ಬಂದಿದ್ದು ಆರಂಭದಲ್ಲಿ ಶಿವರಾಜ್ ಕುಮಾರ್ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿಯಿರುವ ಶಿವಣ್ಣ ಮನೆಗೆ ಬಂದು ಅವರ ಜೊತೆ ಮಾತನಾಡಿ ಶಿವಣ್ಣ ಮತ್ತು ಅವರ ಪತ್ನಿ ಗೀತಾ ಅವರಿಗೆ ಸಾಂತ್ವನ ಹೇಳಿದ್ದಾರೆ.
ಅಲ್ಲಿಂದ ಸದಾಶಿವನಗರದ ಪುನೀತ್ ನಿವಾಸಕ್ಕೆ ತೆರಳಿ ನಂತರ ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್ ಸಮಾಧಿಗೆ ಕೂಡ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.