ಕುಟುಂಬದೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಾಕಿಂಗ್ ಸ್ಟಾರ್ ಯಶ್
ರಾಕಿಂಗ್ ಸ್ಟಾರ್ ಯಶ್ ಅವರಿಗೆ 36ನೇ ಹುಟ್ಟುಹಬ್ಬದ ಸಂಭ್ರಮ. ಕೋವಿಡ್-19 ಹಿನ್ನೆಲೆಯಲ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
Published: 08th January 2022 06:49 PM | Last Updated: 08th January 2022 06:49 PM | A+A A-

ಯಶ್ ಹುಟ್ಟುಹಬ್ಬ ಆಚರಣೆಯ ಫೋಟೋ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರಿಗೆ 36ನೇ ಹುಟ್ಟುಹಬ್ಬದ ಸಂಭ್ರಮ. ಕೋವಿಡ್-19 ಹಿನ್ನೆಲೆಯಲ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಪತ್ನಿ ರಾಧಿಕಾ ಪಂಡಿತ್ ಹಾಗೂ ಇಬ್ಬರು ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಣೆಯ ಫೋಟೊವೊಂದನ್ನು ಯಶ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶನಿವಾರ ಹಂಚಿಕೊಂಡಿದ್ದಾರೆ.
ಬರ್ತ್ ಡೇ ಎಂದಿಗೂ ನನ್ನನ್ನು ಎಕ್ಸೈಟ್ ಮಾಡಿಲ್ಲ. ಆದರೆ, ಅದರ ಸುತ್ತಲೂ ಸಂತೋಷವನ್ನು ನೋಡುತ್ತಿದ್ದೇನೆ. ಈಗ ವಿಶೇಷವಾಗಿ ನನ್ನ ಮಕ್ಕಳೊಂದಿಗೆ ಆಚರಿಸಿಕೊಳ್ಳುತ್ತಿದ್ದೇನೆ. ಪ್ರತಿಯೊಬ್ಬ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಧನ್ಯವಾದ ಹೇಳಲು ಇದನ್ನು ಬಳಸಿಕೊಳ್ಳುತ್ತೇವೆ, ಎಲ್ಲರೂ ಸುರಕ್ಷಿತರಾಗಿದ್ದೀರಿ ಎಂದು ಭಾವಿಸಿದ್ದೇನೆ, ಕಾಳಜಿ ವಹಿಸಿ ಎಂದು ಬರೆದುಕೊಂಡಿದ್ದಾರೆ.