ಅಲ್ಲು ಅರ್ಜುನ್ ಜೊತೆಗಿನ ಪುಷ್ಟ ಸಿನಿಮಾ ನಂತರ ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ ಮಂದಣ್ಣ
ಅಲ್ಲು ಅರ್ಜುನ್ ಅಭಿನಯದ ಈ ಸಿನಿಮಾದ ಬಾಕ್ಸ್ ಆಫೀಸ್ನಲ್ಲಿ ಪ್ರಚಂಡ ಕಲೆಕ್ಷನ್ ಮಾಡುತ್ತಿದ್ದಂತೆಯೇ, ರಶ್ಮಿಕಾ ಮಂದಣ್ಣ ಸಂಭಾವನೆ ಕೂಡ ಗಗನಕ್ಕೇರಿದೆ, ಈಗಾಗಲೇ ತಿಳಿದಿರುವಂತೆ ‘ಪುಷ್ಪ’ ಚಿತ್ರದ ಎರಡನೇ ಪಾರ್ಟ್ ಸಿದ್ಧವಾಗುತ್ತಿದೆ.
Published: 10th January 2022 09:12 AM | Last Updated: 10th January 2022 01:04 PM | A+A A-

ರಶ್ಮಿಕಾ ಮಂದಣ್ಣ
ಚಿತ್ರರಂಗಕ್ಕೆ ಕಾಲಿಟ್ಟ ಐದೇ ವರ್ಷಕ್ಕೆ ಟಾಲಿವುಡ್ನ ಟಾಪ್ ನಟಿಯಾಗಿ ಗುರುತಿಸಿಕೊಂಡವರು ನಟಿ ರಶ್ಮಿಕಾ ಮಂದಣ್ಣ. 'ಗೀತ ಗೋವಿಂದಂ', 'ಸರಿಲೇರು ನೀಕೆವ್ವರು'ದಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿದ ಮೇಲೆ ರಶ್ಮಿಕಾ ಮಂದಣ್ಣ ಸಂಭಾವನೆ ಕೋಟಿ ದಾಟಿತ್ತು. ಇದೀಗ ಅವರ ಕರಿಯರ್ಗೆ 'ಪುಷ್ಪ' ಸಿನಿಮಾ ದೊಡ್ಡ ಮೈಲೇಜ್ ನೀಡಿದೆ.
ಅಲ್ಲು ಅರ್ಜುನ್ ಅಭಿನಯದ ಈ ಸಿನಿಮಾದ ಬಾಕ್ಸ್ ಆಫೀಸ್ನಲ್ಲಿ ಪ್ರಚಂಡ ಕಲೆಕ್ಷನ್ ಮಾಡುತ್ತಿದ್ದಂತೆಯೇ, ರಶ್ಮಿಕಾ ಮಂದಣ್ಣ ಸಂಭಾವನೆ ಕೂಡ ಗಗನಕ್ಕೇರಿದೆ, ಈಗಾಗಲೇ ತಿಳಿದಿರುವಂತೆ ‘ಪುಷ್ಪ’ ಚಿತ್ರದ ಎರಡನೇ ಪಾರ್ಟ್ ಸಿದ್ಧವಾಗುತ್ತಿದೆ. ಆ ಸಿನಿಮಾದಲ್ಲೂ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಅಭಿನಯಿಸಲಿದ್ದಾರೆ. ಮೊದಲ ಪಾರ್ಟ್ ಗೆದ್ದ ಬಳಿಕ ಎರಡನೇ ಪಾರ್ಟ್ಗೆ ರಶ್ಮಿಕಾ ಹೆಚ್ಚು ಸಂಬಳ ಕೇಳುತ್ತಿದ್ದಾರಂತೆ. ಮೊದಲ ಪಾರ್ಟ್ಗೆ 2 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದ ಅವರು ಈಗ 3 ಕೋಟಿ ರೂ. ಡಿಮ್ಯಾಂಡ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಂದರೆ, ಅವರು ಶೇ.50ರಷ್ಟು ಸಂಭಾವನೆಯನ್ನು ಹಚ್ಚಿಸಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ: ಇನ್ಮುಂದೆ ರಶ್ಮಿಕಾ ಹೆಸರು ರಶ್ಮಿಕಾ ಮಂದಣ್ಣ ಅಲ್ವಂತೆ!
ರಶ್ಮಿಕಾ ಮಂದಣ್ಣ ಈಗ ಗೆಲ್ಲುವ ಕುದುರೆ ಆಗಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಮುಗಿಬೀಳುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರಿಗೆ ಬಾಲಿವುಡ್ನಿಂದಲೂ ಬುಲಾವ್ ಬಂದಿದೆ. ಅಮಿತಾಭ್ ಬಚ್ಚನ್ ಜೊತೆ ‘ಗುಡ್ ಬೈ’ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಜೊತೆ ‘ಮಿಷನ್ ಮಜ್ನು’ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.