
ಲೋಗೋ ಬಿಡುಗಡೆ
ಬೆಂಗಳೂರು: 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿತು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಲನಚಿತ್ರೋತ್ಸವದ ಲೋಗೋ ಬಿಡುಗಡೆ ಮಾಡಿದರು.
ಸಭೆ ಬಳಿಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಜತೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಬಗ್ಗೆ ಚರ್ಚೆ ನಡೆಸಲಾಯ್ತು. ಚಲನಚಿತ್ರೋತ್ಸವ ನಡೆಸಲು ಸಿಎಂ ಆದೇಶ ಕೊಟ್ಟಿದ್ದಾರೆ. ಭಾರತದಲ್ಲಿ ಇದು ಐದನೇ ದೊಡ್ಡ ಚಲನಚಿತ್ರೋತ್ಸವ. ಕೋವಿಡ್ ನಿಯಮಾವಳಿ ಪಾಲಿಸಿ ಚಲನಚಿತ್ರೋತ್ಸವ ನಡೆಸ್ತೇವೆ. ಮಾರ್ಚ್ 3 ರಂದು ಜಿಕೆವಿಕೆಯಲ್ಲಿ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆಯಾಗಲಿದೆ ಎಂದರು.
ಇದನ್ನು ಓದಿ: 'ಅಭಿ' ನಿರ್ದೇಶನದ ಚೊಚ್ಚಲ ಸಿನಿಮಾಗೆ 'ಶ್ರೇಷ್ಠ' ನಾಯಕ!
ತೋಟಗಾರಿಕಾ ಸಚಿವ ಮುನಿರತ್ನ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಂ, ಸಂಘಟನಾ ಸಮಿತಿ ಸದಸ್ಯರಾದ ಖ್ಯಾತ ಕಲಾವಿದೆ ಸುಧಾರಾಣಿ, ಕಲಾ ನಿರ್ದೇಶಕ ಶಶಿಧರ್ ಅಡಪ, ಕಲಾವಿದೆ ಸೋನುಗೌಡ, ಕಲಾ ನಿರ್ದೇಶಕ ಹೆಚ್.ಎನ್.ನರಹರಿರಾವ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಆಯುಕ್ತ ಡಾ. ಪಿ.ಎಸ್.ಹರ್ಷಾ ಉಪಸ್ಥಿತರಿದ್ದರು.