’ಕಾಳಿ’ ಮಾತೆ ಕೈಯಲ್ಲಿ ಸಿಗರೇಟು; ವಿವಾದಕ್ಕೀಡಾದ ನಿರ್ದೇಶಕಿ ಲೀನಾ, ಹಿಂದೂಪರ ಸಂಘಟನೆಗಳ ಆಕ್ರೋಶ
ಹಿಂದೂಗಳ ದೇವತೆ ಕಾಳಿಮಾತೆಯನ್ನು ವಿವಾದಾತ್ಮಕವಾಗಿ ಚಿತ್ರಿಸಿದ ಆರೋಪದ ಮೇರೆಗೆ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.
Published: 04th July 2022 02:17 PM | Last Updated: 04th July 2022 02:34 PM | A+A A-

ಕಾಳಿ ಸಾಕ್ಷ್ಯಚಿತ್ರದ ಪೋಸ್ಚರ್
ಚೆನ್ನೈ: ಹಿಂದೂಗಳ ದೇವತೆ ಕಾಳಿಮಾತೆಯನ್ನು ವಿವಾದಾತ್ಮಕವಾಗಿ ಚಿತ್ರಿಸಿದ ಆರೋಪದ ಮೇರೆಗೆ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.
Super thrilled to share the launch of my recent film - today at @AgaKhanMuseum as part of its “Rhythms of Canada”
— Leena Manimekalai (@LeenaManimekali) July 2, 2022
Link: https://t.co/RAQimMt7Ln
I made this performance doc as a cohort of https://t.co/D5ywx1Y7Wu@YorkuAMPD @TorontoMet @YorkUFGS
Feeling pumped with my CREW pic.twitter.com/L8LDDnctC9
ಹೌದು.. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ವಿರುದ್ಧ ಟ್ವಿಟರ್‌ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡಿನ ಲೀನಾ ಮಣಿಮೇಕಲೈ ಅವರು ‘ಕಾಳಿ‘ ಎಂಬ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದು, ಶನಿವಾರ ಅವರು ಈ ಸಾಕ್ಷ್ಯಚಿತ್ರದ ಪೋಸ್ಟರ್ ಅನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಹಿಂದೂ ದೇವತೆ ಕಾಳಿ ಮಾತೆ ಸಿಗರೇಟ್ ಸೇದುತ್ತಿರುವುದು ಹಾಗೂ ಕೈಯಲ್ಲಿ ಎಲ್‌ಜಿಬಿಟಿಕ್ಯೂb(LGBTQ) ಸಮುದಾಯದ ಧ್ವಜವನ್ನು ಹಿಡಿದಿರುವ ಅವತಾರದಲ್ಲಿ ತೋರಿಸಲಾಗಿದೆ.
ಇದನ್ನೂ ಓದಿ: ವಿಕ್ರಾಂತ್ ರೋಣನ 'ಲಾಲಿ' ಹಾಡಿನಲ್ಲಿ ತಂದೆಯ ಪ್ರಾಮಾಣಿಕತೆ ಮತ್ತು ಬೇಷರತ್ತಾದ ಪ್ರೀತಿಯಿದೆ: ಸುದೀಪ್
ಈ ಪೋಸ್ಟರ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಲೀನಾ ಮಣಿಮೇಕಲೈ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಲಾಗುತ್ತಿದೆ. ಟ್ವಿಟರ್‌ನಲ್ಲಿ ಅರೆಸ್ಟ್ ಲೀನಾ ಮಣಿಮೇಕಲೈ (#ArrestLeenaManimekalai) ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗಿದ್ದು, ಸಾವಿರಾರು ಬಳಕೆದಾರರು ಲೀನಾ ಅವರನ್ನು ಬಂಧಿಸಬೇಕು ಎಂದು ಪ್ರಧಾನ ಮಂತ್ರಿ ಕಚೇರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಐಶ್ವರ್ಯಾ ರೈ ನಟನೆಯ ಮಣಿರತ್ನಂ ನಿರ್ದೇಶನದ 'ಪೊನ್ನಿಯಿನ್ ಸೆಲ್ವನ್-1' ಮೋಷನ್ ಪೋಸ್ಟರ್ ಬಿಡುಗಡೆ
2021 ರಲ್ಲಿ, ಸೈಫ್ ಅಲಿ ಖಾನ್ ಅಭಿನಯದ ವೆಬ್ ಸರಣಿ 'ತಾಂಡವ್' ನಲ್ಲಿ ಹಿಂದೂ ದೇವರುಗಳನ್ನು ಕೆಟ್ಟದಾಗಿ ಚಿತ್ರಿಸಲಾಗಿದೆ ಎಂಬ ಕಾರಣಕ್ಕಾಗಿ ಧಾರ್ಮಿಕ ಉದ್ವಿಗ್ನತೆಯ ಸಾಧ್ಯತೆಯನ್ನು ಸೃಷ್ಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.