ಚೆನ್ನೈ: ಖ್ಯಾತ ಚಿತ್ರ ನಿರ್ದೇಶಕ ಮಣಿ ರತ್ನಂ ಆಸ್ಪತ್ರೆಗೆ ದಾಖಲು

ಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯೊಂದಕ್ಕೆ ಮಣಿರತ್ನಂ ಇಂದು ದಾಖಲಾಗಿದ್ದಾರೆ. ಆದರೆ, ಈ ಕುರಿತು ಆಸ್ಪತ್ರೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಚಿತ್ರ ನಿರ್ದೇಶಕ ಮಣಿರತ್ನಂ
ಚಿತ್ರ ನಿರ್ದೇಶಕ ಮಣಿರತ್ನಂ
Updated on

ಚೆನ್ನೈ: ಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯೊಂದಕ್ಕೆ ಮಣಿರತ್ನಂ ಇಂದು ದಾಖಲಾಗಿದ್ದಾರೆ. ಆದರೆ, ಈ ಕುರಿತು ಆಸ್ಪತ್ರೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಜ್ವರದ ಲಕ್ಷಣ ಕಾಣಿಸಿಕೊಂಡ ನಂತರ ಮಣಿರತ್ನಂ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ. ಕೋವಿಡ್-19 ನೆಗೆಟಿವ್ ವರದಿ ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪೊನ್ನಿಯಿನಿ ಸೆಲ್ವಾನ್ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಮಣಿರತ್ನಂ ನಿರತರಾಗಿದ್ದರು. ಈ ಚಿತ್ರ ಸೆಪ್ಟೆಂಬರ್ 30 ರಂದು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com