
ಮಲೈಕಾ ವಸುಪಾಲ್

ರಾಧಿಕಾ ಪಂಡಿತ್, ರಚಿತಾ ರಾಮ್ ಹಾಗೂ ಅದಿತಿ ಪ್ರಭುದೇವ ಅವರಂತೆ ಮತ್ತೊಬ್ಬ ಧಾರಾವಾಹಿ ನಟಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದ್ದಾರೆ.
ಹಿಟ್ಲರ್ ಕಲ್ಯಾಣ ಧಾರಾವಾಹಿ ಮೂಲಕ ಮನೆ ಮಾತಾಗಿರುವ ಮಲೈಕಾ ವಸುಪಾಲ್ ಸಿನಿಮಾಗೆ ಎಂಟ್ರಿ ನೀಡುತ್ತಿದ್ದಾರೆ. ಅನಿಲ್ ಕುಮಾರ್ ನಿರ್ದೇಶನದ ಉಪಾಧ್ಯಕ್ಷ ಸಿನಿಮಾದಲ್ಲಿ ಹಾಸ್ಯನಟ ಚಿಕ್ಕಣ್ಣ ಅವರ ಜೊತೆ ಅಭಿನಯಿಸಲಿದ್ದಾರೆ.
ಇದನ್ನೂ ಓದಿ: 'ಉಪಾಧ್ಯಕ್ಷ' ಸಿನಿಮಾದಲ್ಲಿ ಹೀರೋ ಆಗಿ ಲಾಂಚ್ ಆಗುತ್ತಿದ್ದಾರೆ ಹಾಸ್ಯ ನಟ ಚಿಕ್ಕಣ್ಣ!
ಈ ಸಿನಿಮಾದಲ್ಲಿ ರವಿಶಂಕರ್, ವೀಣಾ ಸುಂದರ್ ಮತ್ತು ಸಾಧು ಕೋಕಿಲಾ ಕೂಡ ನಟಿಸಿದ್ದಾರೆ. ಧಾರಾವಾಹಿ ಮತ್ತು ಈ ಚಿತ್ರದ ನಡುವೆ ಜಗ್ಗಾಟ ನಡೆಸಲಿರುವ ಮಲೈಕಾ, ಮೈಸೂರಿನಲ್ಲಿ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.