
ಸೂರಪ್ಪ ಬಾಬು
ಸ್ಯಾಂಡಲ್ವುಡ್ನ ಖ್ಯಾತ ನಿರ್ಮಾಪಕರಾದ ಸೂರಪ್ಪ ಬಾಬು ಮತ್ತವರ ಕುಟುಂಬಸ್ಥರು ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಹೊಸೂರಿನ ಹೆದ್ದಾರಿಯ ರಸ್ತೆ ಬಳಿಯಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಯಾರಿಗೂ ಯಾವುದೇ ತೊಂದರೆಯಾಗಿಲ್ಲ, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸೂರಪ್ಪ ಬಾಬು ಹಾಗೂ ಕುಟುಂಬದವರು ಇಂದು ಬೆಳಗ್ಗೆ ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸೂರಪ್ಪ ಬಾಬು ಹಾಗೂ ಕುಟುಂಬಸ್ಥರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.