ವಿವಾದಾತ್ಮಕ ಹೇಳಿಕೆ: ನಟ ಚೇತನ್ ಅಮೆರಿಕಕ್ಕೆ ಗಡಿಪಾರು ಆಗುವ ಸಾಧ್ಯತೆ
ವಿವಾದಾತ್ಮಕ ಹೇಳಿಕೆ, ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಗಳನ್ನು ಹಾಕಿ ಕಾನೂನು ಕಟ್ಟಳೆಗಳ ಸವಾಲುಗಳನ್ನು ಎದುರಿಸುತ್ತಿರುವ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸರನ್ನು ಅಮೆರಿಕಕ್ಕೆ ಗಡಿಪಾರು ಮಾಡುವ ಸಾಧ್ಯತೆಯಿದೆ.
Published: 01st March 2022 08:51 AM | Last Updated: 01st March 2022 01:11 PM | A+A A-

ನಟ ಚೇತನ್
ಬೆಂಗಳೂರು: ವಿವಾದಾತ್ಮಕ ಹೇಳಿಕೆ, ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಗಳನ್ನು ಹಾಕಿ ಕಾನೂನು ಕಟ್ಟಳೆಗಳ ಸವಾಲುಗಳನ್ನು ಎದುರಿಸುತ್ತಿರುವ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸರನ್ನು ಅಮೆರಿಕಕ್ಕೆ ಗಡಿಪಾರು ಮಾಡುವ ಸಾಧ್ಯತೆಯಿದೆ. ಬ್ರಾಹ್ಮಣತ್ವ ಬಗ್ಗೆ ಕಳೆದ ವರ್ಷ ಜೂನ್ ತಿಂಗಳಲ್ಲಿ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದು. ಈ ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನರು, ಆದರೆ ಕೆಲವರು ಶ್ರೇಷ್ಠರು ಎಂಬ ಬ್ರಾಹ್ಮಣ ಸಮುದಾಯದ ಆಲೋಚನೆಗಳು ಸರಿಯಲ್ಲ ಎಂದು ಹೇಳಿದ್ದರು.
ಆಗಸ್ಟ್ 2021ರ ದಾಖಲೆಗಳು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಲಭ್ಯವಾಗಿದ್ದು, ಅದರಲ್ಲಿ ಬಸವನಗುಡಿ ಪೊಲೀಸ್ ಠಾಣೆಯಿಂದ ಪೊಲೀಸ್ ಮಹಾ ನಿರ್ದೇಶಕರ ಕಚೇರಿ ಮೂಲಕ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿರುವ ಪತ್ರವಿದೆ.
ಅಮೆರಿಕದ ಪೌರತ್ವ ಹೊಂದಿರುವ ನಟ ಚೇತನ್ ಮೇಲೆ ಪೊಲೀಸರು ಗಡಿಪಾರು ಮಾಡುವ ದಾಖಲೆಗಳನ್ನು ಸಿದ್ಧಪಡಿಸಿದ್ದಾರೆ. ನಟ ಚೇತನ್ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಗೃಹ ಕಾರ್ಯದರ್ಶಿಯ ಮುಂದೆ ಅವರ ಪ್ರಕರಣ ಬಾಕಿ ಇದ್ದು, ಪತ್ರಕ್ಕೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸಹಿ ಹಾಕಿದ್ದಾರೆ.
ಇದನ್ನೂ ಓದಿ: ನ್ಯಾಯಾಂಗ ನಿಂದನೆ ಆರೋಪ: ಜಾಮೀನಿನ ಮೇಲೆ ನಟ ಚೇತನ್ ಬಿಡುಗಡೆ
ಕಳೆದ ತಡರಾತ್ರಿ ಈ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಫೋನ್ ಮೂಲಕ ಸಂಪರ್ಕಿಸಲು ನೋಡಿದಾಗ ಫೋನ್ ಕರೆಯನ್ನು ಕಡಿತಗೊಳಿಸಿದರು. ಎಡಿಜಿಪಿ ಪ್ರತಾಪ್ ರೆಡ್ಡಿ ಅವರು, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸದ ಹೊರತು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದರು. ನಟ ಚೇತನ್ ಅಹಿಂಸ ಅವರ ಫೋನ್ ಸ್ವಿಚ್ ಆಫ್ ಆಗಿತ್ತು.