ಅಪ್ಪು ಜೊತೆಗಿನ ಮಧುರ ಕ್ಷಣಗಳನ್ನು ಹಂಚಿಕೊಂಡ ಜನಾರ್ದನ ರೆಡ್ಡಿ ಪುತ್ರ 'ಕಿರೀಟಿ'
''ಜಾಕಿ' ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ನಡೆದ ಎರಡು ಘಟನೆಗಳನ್ನು ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಭಾವನಾತ್ಮಕವಾಗಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Published: 04th March 2022 08:19 PM | Last Updated: 04th March 2022 08:20 PM | A+A A-

ಅಪ್ಪು ಜೊತೆ ಕಿರೀಟಿ
ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿರುವ ಸುದ್ದಿ ಈಗಾಗಲೇ ಹೊರಬಿದ್ದಿದೆ. ಅದರ ಬೆನ್ನಲ್ಲೇ ಕಿರೀಟಿ ತಮ್ಮ ಹಾಗೂ ಪುನೀತ್ ರಾಜ್ ಕುಮಾರ್ ಅವರೊಂದಿಗಿನ ಒಡನಾತವನ್ನು ಮೆಲುಕು ಹಾಕಿದ್ದಾರೆ.
ಇದನ್ನೂ ಓದಿ: 'ವಿಕ್ರಾಂತ್ ರೋಣ' ಮತ್ತೊಂದು ದಾಖಲೆ: ಇಂಗ್ಲೀಷ್ ವರ್ಷನ್ ಗೆ ಕಿಚ್ಚ ಸುದೀಪ್ ಡಬ್ಬಿಂಗ್!
'ಜಾಕಿ' ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ನಡೆದ ಎರಡು ಘಟನೆಗಳನ್ನು ನೆನಪಿಸಿಕೊಂಡ ಕಿರೀಟಿ ಅದನ್ನು ಭಾವನಾತ್ಮಕವಾಗಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದರ ಜೊತೆ ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಒಂದು ಚಿತ್ರದಲ್ಲಿ ಕಿರೀಟಿ ಬಾಲಕನಾಗಿದ್ದರೆ ಮತ್ತೊಂದು ಚಿತ್ರದಲ್ಲಿ ಕಿರೀಟಿ ಯುವಕ.
ಇದನ್ನೂ ಓದಿ: 'ಜೇಮ್ಸ್' ಚಿತ್ರಕ್ಕೆ ಪುನೀತ್ ರಾಜ್ ಕುಮಾರ್ ಶಕ್ತಿ, ಪ್ರೋತ್ಸಾಹದ ಮೂಲ: ಸಂಗೀತ ನಿರ್ದೇಶಕ ಚರಣ್ ರಾಜ್
ಕಿರೀಟಿ ಪೋಸ್ಟ್
ಈ ಎರಡು ಚಿತ್ರಗಳ ನಡುವಿನ ವ್ಯತ್ಯಾಸ 10 ವರ್ಷಗಳದ್ದು. ಆದರೂ ಆ ನೆನಪುಗಳು ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. 2010ರಲ್ಲಿ ಜಾಕಿ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ನಾನು ಅಪ್ಪು ಸರ್ ಅವರನ್ನು ಮೊದಲ ಸಲ ಭೇಟಿಯಾದೆ. ಅವರ ಡ್ಯಾನ್ಸ್, ಆ್ಯಕ್ಷನ್, ಸ್ಕ್ರೀನ್ ಪ್ರೆಸೆನ್ಸ್ ನೋಡಿ ಅಚ್ಚರಿಗೊಂಡಿದ್ದೆ. ಆದರೆ, ಅವರು ಆಫ್ ಸ್ಕ್ರೀನ್ ನಲ್ಲಿದ್ದ ರೀತಿ ಮನಸಿಗೆ ಹತ್ತಿರವಾಯಿತು. ನಾವು ಥಿಯೇಟರ್‌ನಿಂದ ನನ್ನ ಮನೆಗೆ ಹೋಗುತ್ತಿದ್ದಾಗ, ಮಳೆ ಬೀಳುತ್ತಿತ್ತು ಮತ್ತು ಪುನೀತ್ ಸರ್ ಅವರೆ ನಬ್ಬರಿಗೂ ಕೊಡೆ ಹಿಡಿದರು. ನೃತ್ಯದ ಬಗ್ಗೆ ಮತ್ತು ಅವರ ಆಕ್ಷನ್ ಬಗ್ಗೆ ನನ್ನೊಂದಿಗೆ ಮಾತನಾಡುತ್ತಿದ್ದರು. ಚಿಕ್ಕ ಹುಡುಗನಿಗೆ ಕೊಡೆ ಹಿಡಿದ ಸೂಪರ್‌ಸ್ಟಾರ್. ನಮ್ಮ ಕನಸಿನಲ್ಲಿಯೂ ಊಹಿಸಲಾಗದ ಸಂಗತಿ. ಅದು ಪುನೀತ್ ಸರ್ ಅವರಿಂದ ಮಾತ್ರ ಸಾಧ್ಯ. ಆ ದಿನ ನಾನು ಸರಳತೆಯ ಮೌಲ್ಯವನ್ನು ಅರಿತೆ. ಇದು ಅಪ್ಪು ಸರ್ ಅವರಿಂದ ನಾನು ಅತ್ಯಮೂಲ್ಯವಾದ ಪಾಠ.
ಜಗತ್ತಿಗೆ ನನ್ನನ್ನು ಪರಿಚಯಿಸಿಕೊಳ್ಳಲು ಒಂದು ದಿನ ಬಾಕಿ. ಇದೆಲ್ಲಾ ಶುರುವಾಗಿದ್ದು ಪುನೀತ್ ರಾಜ್‌ಕುಮಾರ್ ಸರ್ ಅವರಿಂದ. ಸ್ಫೂರ್ತಿ, ಮಾದರಿ, ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನನ್ನ ಜೀವನದ ಮಾರ್ಗದರ್ಶಿ ಅವರು. 'ನಿಮ್ಮ ಮಾತುಗಳನ್ನು ಎಂದಿಗೂ ಮರೆಯುವುದಿಲ್ಲ ಸರ್'. ನನ್ನ ಮೇಲಿನ ನಿಮ್ಮ ನಂಬಿಕೆಯೆ ರಕ್ಷಾಕವಚ. ನಾನು ಅದನ್ನು ಜವಾಬ್ದಾರಿಯಿಂದ ನಿಭಾಯಿಸುತ್ತೇನೆ. ನೀವು ಮತ್ತು ನಮ್ಮ ಜನತೆ ಯಾವಾಗಲೂ ಹೆಮ್ಮೆಪಡುವಂತೆ ಮಾಡಲು ಸದಾ ಶ್ರಮಿಸುತ್ತೇನೆ.
ಇಂತಿ, ಕಿರೀಟಿ
ಇದನ್ನೂ ಓದಿ: ಚೊಚ್ಚಲ ಸಿನಿಮಾವನ್ನು ಇದಕ್ಕಿಂತ ಬೆಟರ್ ಆಗಿ ಲಾಂಚ್ ಮಾಡಲು ಸಾಧ್ಯವೇ ಇಲ್ಲ: ಜನಾರ್ದನ ರೆಡ್ಡಿ ಪುತ್ರ ಕಿರೀಟಿ
ಕಿರೀಟಿ ಹೀಗೆ ಅಪ್ಪು ಒಟ್ಟಿಗಿನ ನೆನಪಿನ ಬುತ್ತಿ ಬಿಚ್ಚಿಟ್ಟಿದ್ದು, ತಮ್ಮ ಮುಂದಿನ ಸಿನಿಮಾ ಹಾದಿಗೆ ಜೊತೆಯಾಗಿ ಇರಬೇಕೆಂದು ಕೇಳಿಕೊಂಡಿದ್ದಾರೆ.
ಇದನ್ನೂ ಓದಿ: ಇತರೆ ಪ್ರಾಂತ್ಯಗಳ ಕನ್ನಡದ ಗೇಲಿ ನಿಲ್ಲಬೇಕು: ಸಿನಿಮಾ ಭಾಷೆಯ ಕುರಿತು ಗಿರೀಶ್ ಕಾಸರವಳ್ಳಿ ಪಾಠ