ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕನ ‘ವರ್ಣಪಟಲ’ ಸಿನಿಮಾದಲ್ಲಿ 'ಆಟಿಸಂ' ಸಮಸ್ಯೆ ಕುರಿತ ಕಥಾವಸ್ತು
ಎಲ್ಲರ ಅಮ್ಮಂದಿರ ತರ ನಾನು ಅಮ್ಮ ಅಲ್ಲ.. ಎಲ್ಲರ ಮಕ್ಕಳಂತೆ ನನ್ನ ಮಗಳಲ್ಲ .. ಎಂಬ ಡೈಲಾಗ್ ನಿಂದ ಶುರುವಾಗುವ ಟ್ರೇಲರ್ ನಲ್ಲಿ ಪ್ರೀತಿ, ಮಮತೆ, ನೋವು ಎಲ್ಲವನ್ನು ಒಳಗೊಂಡಿದೆ.
Published: 14th March 2022 11:53 AM | Last Updated: 14th March 2022 01:35 PM | A+A A-

ಸಿನಿಮಾ ಪೋಸ್ಟರ್
ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ‘ವರ್ಣಪಟಲ’ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ವರ್ಲ್ಡ್ ಪ್ರೀಮಿಯರ್ ಫಿಲ್ಮ್ ಪ್ರಶಸ್ತಿ, ಲಂಡನ್ ಇಂಡಿಪೆಂಡೆಂಟ್ ಫಿಲ್ಮ್ ಅವಾರ್ಡ್ನಲ್ಲಿ ಬೆಸ್ಟ್ ಫಾರಿನ್ ಫೀಚರ್ ಫಿಲ್ಮ್ ಪ್ರಶಸ್ತಿ ಜೊತೆಗೆ ಹಲವು ಪ್ರಶಸ್ತಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.
ಇದನ್ನೂ ಓದಿ: ಕಲ್ಲು ಹೃದಯವನ್ನೂ ಕರಗಿಸುವ 'ಜುಗಲ್ ಬಂದಿ' ಸಿನಿಮಾದ ‘ಇಂಥವರ ಸಂತಾನ ಭಾಗ್ಯ’ ಹಾಡು
ನಿತ್ಯಾ ಪಾತ್ರಕ್ಕೆ ಕಿರುತೆರೆಯ ಖ್ಯಾತ ನಟಿ ಜ್ಯೋತಿ ರೈ ನಾಯಕಿಯಾಗಿ ನಟಿಸಿದ್ದು, ತುಳು ಸಿನಿಮಾಗಳಿಂದ ಖ್ಯಾತಿ ಗಳಿಸಿರುವ ಅನೂಪ್ ಸಾಗರ್ ನಾಯಕನಾಗಿ ನಟಿಸಿದ್ದಾರೆ. ಖ್ಯಾತ ಬಹುಭಾಷಾ ನಟಿ ಸುಹಾಸಿನಿ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಧನಿಕ ಹೆಗ್ಡೆ, ಚೇತನ್ ರೈ ಮಾಣಿ, ಇಳಾ ವಿಟ್ಲಾ, ಅರವಿಂದ್ ರಾವ್ ಹಾಗೂ ಶ್ರೀಕಾಂತ್ ಹೆಬ್ಳಿಕರ್ ಮೊದಲಾದವರು ನಟಿಸಿದ್ದಾರೆ.
ಇದನ್ನೂ ಓದಿ: 'ಅನಿಮಲ್' ಸಿನಿಮಾದ ಸ್ಪೆಷಲ್ ಸಾಂಗ್ ಗೆ ರಣಬೀರ್ ಕಪೂರ್ ಜೊತೆ ರಶ್ಮಿಕಾ ಸ್ಟೆಪ್!
ವರ್ಣಪಟಲ ಸಿನಿಮಾದ ಚಿತ್ರಕಥೆ ಹಾಗೂ ನಿರ್ಮಾಣವನ್ನು ಡಾ. ಸರಸ್ವತಿ ಹೊಸದುರ್ಗ, ಕವಿತಾ ಸಂತೋಷ್ ಹೊತ್ತಿದ್ದು. ಈ ಚಿತ್ರಕ್ಕೆ ಕಾರ್ತೀಕ್ ಸರ್ಗೂರು ರವರ ಸಾಹಿತ್ಯವಿದ್ದು, ಕಿರುತೆರೆಯ ಖ್ಯಾತ ನಿರ್ದೇಶಕ ವಿನು ಬಳಂಜ ಸಂಭಾಷಣೆ ಬರೆದಿದ್ದಾರೆ. ಗಣೇಶ್ ಹೆಗ್ಡೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
ಇದನ್ನೂ ಓದಿ: 'ಗುಲ್ಟೂ' ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಮುಂದಿನ ಸಿನಿಮಾಗೆ ಹೇಮಂತ್ ಎಂ. ರಾವ್ ಬಂಡವಾಳ!