ಬೆಂಗಳೂರು: ಸ್ಯಾಂಡಲ್ ವುಡ್ ಜನಪ್ರಿಯ ನಟಿ ಸಹೋದರನ ವಿರುದ್ಧ ರೇಪ್ ಕೇಸ್!
ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಯುವತಿಗೆ ವಂಚಿಸಿದ ಆರೋಪದ ಮೇರೆಗೆ ಕನ್ನಡ ಚಿತ್ರರಂಗದ ಖ್ಯಾತ ನಟಿಯೊಬ್ಬರ ಸಹೋದರನ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
Published: 17th March 2022 11:06 AM | Last Updated: 17th March 2022 01:35 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಯುವತಿಗೆ ವಂಚಿಸಿದ ಆರೋಪದ ಮೇರೆಗೆ ಕನ್ನಡ ಚಿತ್ರರಂಗದ ಖ್ಯಾತ ನಟಿಯೊಬ್ಬರ ಸಹೋದರನ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
30 ವರ್ಷ ವಯಸ್ಸಿನ ಖಾಸಗಿ ಕಂಪನಿ ಉದ್ಯೋಗಿ ಮೋಸ ಹೋಗಿದ್ದು, ಬನಶಂಕರಿ ಮೂರನೇ ಹಂತದಲ್ಲಿ ನೆಲೆಸಿರುವ ನಟಿ ಸಹೋದರ ಕೀರ್ತಿ ಚಂದ್ರ ಅಲಿಯಾಸ್ ವಿರಾಜ್ ಮೇಲೆ ಆರೋಪ ಕೇಳಿ ಬಂದಿದೆ. ಈ ಪ್ರಕರಣದ ದಾಖಲಾದ ಬಳಿಕ ತಪ್ಪಿಸಿಕೊಂಡಿರುವ ಆರೋಪಿ ಪತ್ತೆಗೆ ತನಿಖೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ 2021ರಲ್ಲಿ ನನಗೆ ಮ್ಯಾಟ್ರಿಮೋನಿಯಲ್ ಶಾದಿ ಡಾಟ್ ಕಾಮ್ನಲ್ಲಿ ಕೀರ್ತಿ ಚಂದ್ರ ಅಲಿಯಾಸ್ ವಿರಾಜ್ ಪರಿಚಯವಾಯಿತು. ಆಗ ತಾನು ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದೇನೆ. ತನ್ನ ತಂಗಿ ಪ್ರಸಿದ್ಧ ಚಲನಚಿತ್ರ ನಟಿ ಎಂದು ಆತ ಹೇಳಿಕೊಂಡಿದ್ದ. ನಂತರ ನನ್ನನ್ನು ಮದುವೆಯಾಗುವುದಾಗಿ ಹೇಳಿ ಮನೆಗೆ ಕರೆದುಕೊಂಡು ಹೋಗಿ ತಂಗಿ ಮತ್ತು ತಾಯಿಗೆ ಪರಿಚಯಿಸಿದ.
ನಮ್ಮ ಮದುವೆಗೆ ಎರಡು ಕುಟುಂಬಗಳು ಒಪ್ಪಿಗೆ ಸೂಚಿಸಿದ್ದವು. ನಂತರ ಈ ವರ್ಷದ ಜನವರಿಯಲ್ಲಿ ಹೋಟೆಲ್ಗೆ ಕರೆಸಿಕೊಂಡು ದೈಹಿಕ ಸಂಪರ್ಕಕ್ಕೆ ಯತ್ನಿಸಿದ. ಆಗ ನಿರಾಕರಿಸಿದ್ದೆ. ನಂತರ ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಈ ದೂರಿನ ಮೇರೆಗೆ ಅತ್ಯಾಚಾರ ಹಾಗೂ ಜೀವ ಬೆದರಿಕೆ ಆರೋಪದಡಿ ನಟಿ ಸಹೋದರನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಬಸವನಗುಡಿ ಮಹಿಳಾ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.