88 ವರ್ಷದ ಎಲ್ಲಾ ದಾಖಲೆ ಉಡೀಸ್, ನಾಲ್ಕು ದಿನಗಳಲ್ಲಿ 100 ಕೋಟಿ ಕ್ಲಬ್ ಸೇರಿದ ಜೇಮ್ಸ್!
ಕನ್ನಡ ಚಿತ್ರರಂಗದ ಸಾರ್ವಕಾಲಿಕ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿದೆ. ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ 100 ಕೋಟಿ ಕ್ಲಬ್ ಸೇರುವ ಮೂಲಕ 88 ವರ್ಷದ ಕನ್ನಡ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಬರೆದಿದೆ.
Published: 22nd March 2022 02:03 PM | Last Updated: 22nd March 2022 02:12 PM | A+A A-

ಜೇಮ್ಸ್ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್
ಬೆಂಗಳೂರು: ಕನ್ನಡ ಚಿತ್ರರಂಗದ ಸಾರ್ವಕಾಲಿಕ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿದೆ. ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ 100 ಕೋಟಿ ಕ್ಲಬ್ ಸೇರುವ ಮೂಲಕ 88 ವರ್ಷದ ಕನ್ನಡ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಬರೆದಿದೆ.
ಪುನೀತ್ ರಾಜ್ ಕುಮಾರ್ ಅವರ ಹುಟ್ಟಹಬ್ಬವಾದ ಮಾರ್ಚ್ 17 ರಂದು ವಿಶ್ವದಾದ್ಯಂತ ನಾಲ್ಕು ಸಾವಿರ ಪರದೆಗಳಲ್ಲಿ ತೆರೆ ಕಂಡಿದ್ದ 'ಜೇಮ್ಸ್' ಚಿತ್ರ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಈ ಚಿತ್ರ ಭಾವನಾತ್ಮಕವಾಗಿ ಪುನೀತ್ ಅಭಿಮಾನಿಗಳನ್ನು ಹೆಚ್ಚು ಸೆಳೆದಿದ್ದು, ಕೊನೆಯ ಬಾರಿಗೆ ತೆರೆಯ ಮೇಲೆ ತನ್ನ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಮೈಸೂರು ವಿವಿ ಘಟಿಕೋತ್ಸವ: ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಧಾನ
ಎಷ್ಟೋ ಕಡೆಗಳಲ್ಲಿ ಪುನೀತ್ ಅಭಿಮಾನಿಗಳು ಒಟ್ಟಾಗಿ ಟಿಕೆಟ್ ಖರೀದಿಸುವ ಮೂಲಕ ಊರಿನ ಜನರಿಗೆ ಸಿನಿಮಾ ತೋರಿಸುತ್ತಿರುವ ಬಗ್ಗೆಯೂ ವರದಿಯಾಗಿದೆ. ಐಎಂಡಿಬಿ ರೇಟಿಂಗ್ಸ್ ನಲ್ಲಿಯೂ ಬಾಲಿವುಡ್ ಚಿತ್ರ ''ದಿ ಕಾಶ್ಮೀರ್ ಫೈಲ್ಸ್'' ಚಿತ್ರವನ್ನು ಮೀರಿಸಿರುವ ಜೇಮ್ಸ್ ಚಿತ್ರಕ್ಕೆ ಸರ್ಕಾರ ತೆರಿಗೆ ನೀಡಬೇಕೆಂಬ ಬೇಡಿಕೆಯೂ ಇದೆ.
ಚೇತನ್ ಕುಮಾರ್ ನಿರ್ದೇಶನದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿರುವ ಜೇಮ್ಸ್ ಚಿತ್ರ, ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ಬಾಚಿರುವ ಮಾಹಿತಿಯನ್ನು ಸ್ಯಾಂಡಲ್ ವುಡ್ ಎಂಟರ್ ಟೈನ್ ಮೆಂಟ್ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದನ್ನು ನಿರ್ದೇಶಕ ಚೇತನ್ ಕುಮಾರ್ ಕೂಡಾ ರೀ ಟ್ವೀಟ್ ಮಾಡಿದ್ದಾರೆ.
James 100cr #PuneethRajkumar #PriyaAnand #BoloBoloJames #ChethanKumar #AppuLivesOn pic.twitter.com/bM4HPnfT18
— Sandalwood Entertainment (@Sandalwood_Ent) March 21, 2022