
ಸಿನಿಮಾ ತಂಡ
ಉಪೇಂದ್ರ- ವೇದಿಕಾ ಜೋಡಿ ನಟಿಸಿರುವ, ಜಿಬ್ರಾನ್ ಸಂಗೀತ ನೀಡಿರುವ 'ಹೋಮ್ ಮಿನಿಸ್ಟರ್' ಸಿನಿಮಾದ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂದ್ ಆಡಿಯೋ ಮೂಲಕ ಈ ಹಾಡುಗಳು ಬಿಡುಗಡೆಯಾಗಿದೆ. ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ 'ಹೋಮ್ ಮಿನಿಸ್ಟರ್' ಸಿನಿಮಾ ಏಪ್ರಿಲ್ 1ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಇದನ್ನೂ ಓದಿ: ಉಪೇಂದ್ರ ನಿರ್ದೇಶನದ ಮುಂದಿನ ಚಿತ್ರದ ಪೋಸ್ಟರ್ ಬಿಡುಗಡೆ, ಚಿತ್ರದ ಟೈಟಲ್ ಏನು?
ಕಾರ್ಯಕ್ರಮದಲ್ಲಿ ಸಚಿವ ಮುನಿರತ್ನ, ಗೋಲ್ಡನ್ ಸ್ಟಾರ್ ಗಣೇಶ್, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ನಿರಂಜನ್ ಸುಧೀಂದ್ರ, ಪ್ರಿಯಾಂಕ ಉಪೇಂದ್ರ ಹಾಗೂ ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.
ಇದನ್ನೂ ಓದಿ: 'ದಸರಾ' ಸಿನಿಮಾದ ಖಡಕ್ ಲುಕ್ ನಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಮಿಂಚಿಂಗ್
ತಾರಾಗಣದಲ್ಲಿ ತಾನ್ಯ ಹೋಪ್, ಚಾಂದಿನಿ, ಸುಮನ್ ರಂಗನಾಥ್, ಸಾಧುಕೋಕಿಲ, ಶ್ರೀನಿವಾಸ ಮೂರ್ತಿ, ಸುಧಾ ಬೆಳವಾಡಿ, ತಿಲಕ್, ಅವಿನಾಶ್, ಮಾಳವಿಕ ಅವಿನಾಶ್, ಲಾಸ್ಯ ಮತ್ತಿತರರಿದ್ದಾರೆ. ಸುಜಯ್ ಕೆ ಶ್ರೀಹರಿ ನಿರ್ದೇಶಿಸಿದ್ದು, ಧರ್ಮೇಂದ್ರ ಸಂಭಾಷಣೆ ರಚಿಸಿದ್ದಾರೆ. ಪೂರ್ಣಚಂದ್ರ ನಾಯ್ಡು , ಶ್ರೀಕಾಂತ್ ವೀರಮಾಚನೇನಿ ನಿರ್ಮಾಣ ಹೊಣೆ ಹೊತ್ತಿದ್ದಾರೆ.
ಇದನ್ನೂ ಓದಿ: ರಷ್ಯಾದಲ್ಲಿ ಬಾಲಿವುಡ್, ಕೊರಿಯನ್ ಸಿನಿಮಾಗಳ ಪ್ರದರ್ಶನ: ಹಾಲಿವುಡ್ ಗೆ ಪುತಿನ್ ಸರ್ಕಾರ ಸೆಡ್ಡು