ಹೆಚ್ಚು ದುಡ್ಡು ಸಿಗುತ್ತದೆ ಎಂದು ಆಸೆ ಪಡಬಾರದು, ಚಿತ್ರಮಂದಿರ ಸಮಸ್ಯೆ ಬಗೆಹರಿದಿದೆ: ಶಿವರಾಜ್ ಕುಮಾರ್
‘ಜೇಮ್ಸ್’ ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿದಿದ್ದು, ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ.
Published: 24th March 2022 04:35 PM | Last Updated: 24th March 2022 04:48 PM | A+A A-

ಶಿವರಾಜ್ ಕುಮಾರ್ ಮತ್ತು ಸಿಎಂ ಬೊಮ್ಮಾಯಿ
ಬೆಂಗಳೂರು: ‘ಜೇಮ್ಸ್’ ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿದಿದ್ದು, ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: 'ರಾಜಕುಮಾರ'ನಿಗೆ 5 ವರ್ಷ: ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಬರೆದ ಚಿತ್ರವನ್ನು ಸ್ಮರಿಸಿಕೊಂಡ ನಿರ್ದೇಶಕ
‘ಪರಭಾಷಾ ಚಿತ್ರಗಳ ಕಾರಣದಿಂದ ‘ಜೇಮ್ಸ್’ ಚಿತ್ರವನ್ನು ಚಿತ್ರಮಂದಿರಗಳಿಂದ ತೆಗೆಯಲಾಗುತ್ತಿದೆ ಎಂದು ಹರಿದಾಡಿದ ಸುದ್ದಿಗೆ ಸಂಬಂಧಿಸಿದಂತೆ ಇಂದು ನಡೆದ ಸತತ ಸಭೆಗಳ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು, 'ಇಡೀ ಚಿತ್ರರಂಗ ಕುಟುಂಬವಿದ್ದಂತೆ.. ‘ಜೇಮ್ಸ್’ ಅಂದರೆ ಅದೊಂದು ಭಾವನಾತ್ಮಕ ಸಂಬಂಧವಿದೆ. ಅದನ್ನು ಈಗಾಗಲೇ ನಿರ್ಮಾಪಕರು, ನಿರ್ದೇಶಕರು ಹಾಗೂ ಪ್ರದರ್ಶಕರ ಜೊತೆ ಮಾತುಕತೆ ನಡೆಸಿ ಸರಿಪಡಿಸಲಾಗಿದೆ ಎಂದು ಹೇಳಿದರು,
ಇದನ್ನೂ ಓದಿ: ಆರ್ ಆರ್ ಆರ್ ಸಿನಿಮಾದ ಟಿಕೆಟ್ ಬೆಲೆ ಕೇಳಿದ್ರೆ ನೀವು ಬೆಚ್ಚಿ ಬೀಳೋದು ಗ್ಯಾರಂಟಿ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಶಿವರಾಜ್‌ಕುಮಾರ್, ‘ಜೇಮ್ಸ್ ಪ್ರದರ್ಶನ ನಿರಾತಂಕವಾಗಿದೆ. ದಯವಿಟ್ಟು ಯಾರೂ ಆತಂಕ ಪಟ್ಟುಕೊಳ್ಳಬೇಡಿ. ನಿಮಗೆ (ಅಭಿಮಾನಿಗಳಿಗೆ) ನಿಮ್ಮ ನೆಚ್ಚಿನ ನಟನ ಸಿನಿಮಾ ಎಂಬ ಕಾರಣಕ್ಕೆ ಹಾಗೂ ನನಗೆ ನನ್ನ ತಮ್ಮನ ಸಿನಿಮಾ ಎಂಬ ಕಾರಣಕ್ಕೆ ಹೆಚ್ಚು ಆಪ್ತವಾಗುತ್ತಿದೆ. ಈ ಚಿತ್ರಕ್ಕೆ ಯಾವುದೇ ರೀತಿಯ ಸಮಸ್ಯೆ ಆಗಲು ನಾವು ಬಿಡುವುದಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಅವರೂ ಭರವಸೆ ನೀಡಿದ್ದಾರೆ. ಬಿಡುಗಡೆ ಆಗಲಿರುವ ‘ಆರ್‌ಆರ್‌ಆರ್’ ಅಥವಾ ಈಗ ಪ್ರದರ್ಶನಗೊಳ್ಳುತ್ತಿರುವ ‘ಕಾಶ್ಮೀರ್ ಫೈಲ್ಸ್’ ಚಿತ್ರಗಳಿಂದ ‘ಜೇಮ್ಸ್’ಗೆ ಯಾವುದೇ ತೊಂದರೆ ಆಗಿಲ್ಲ. ‘ಕಾಶ್ಮೀರ್ ಫೈಲ್ಸ್’ ಕೂಡಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಅದನ್ನು ತೆಗೆಯಲು ಯಾರೂ ಹೇಳಿಲ್ಲ. ಹಾಗೆ ಹೇಳುವುದೂ ಸರಿಯಲ್ಲ. ಒಂದು ಒಳ್ಳೆಯ ಚಿತ್ರದ ಪ್ರದರ್ಶನಕ್ಕೆ ತಡೆ ಒಡ್ಡುವುದು ಸರಿಯಲ್ಲ. ಅಭಿಮಾನಿಗಳೂ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದರು.
ಇದನ್ನೂ ಓದಿ: 88 ವರ್ಷದ ಎಲ್ಲಾ ದಾಖಲೆ ಉಡೀಸ್, ನಾಲ್ಕು ದಿನಗಳಲ್ಲಿ 100 ಕೋಟಿ ಕ್ಲಬ್ ಸೇರಿದ ಜೇಮ್ಸ್!
'ಹೆಚ್ಚು ದುಡ್ಡು ಸಿಗುತ್ತದೆ ಎಂದು ಆಸೆ ಪಡಬಾರದು
ಇದೇ ವೇಳೆ ಚಿತ್ರ ಮಂದಿರ ಮಾಲೀಕರ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ ಶಿವರಾಜ್ ಕುಮಾರ್ ಅವರು, ಸಿನಿಮಾ ಚೆನ್ನಾಗಿ ಹೋಗುತ್ತಿರುವ ಸಂದರ್ಭದಲ್ಲಿ ಅದನ್ನು ತೆಗೆಯಬಾರದು. ಅದು ಯಾವುದೇ ಚಿತ್ರವಾಗಿದ್ದರೂ ಅವರ ಪರವಾಗಿ ನಿಲ್ಲಬೇಕು. ಅತೀ ಹಣ ಸಿಗುತ್ತದೆ ಎಂದು ಚಿತ್ರಮಂದಿರದವರು ಆಸೆ ಪಡೋಕೆ ಹೋಗಬಾರದು’ ಎಂದು ಕಿವಿ ಮಾತು ಹೇಳಿದರು.
ಇದನ್ನೂ ಓದಿ: ಐಎಂಡಿಬಿ ರೇಟಿಂಗ್ ನಲ್ಲಿ 'ದಿ ಕಾಶ್ಮೀರ್ ಫೈಲ್ಸ್' ಹಿಂದಿಕ್ಕಿದ ಜೇಮ್ಸ್!
ಜೇಮ್ಸ್ ಪ್ರದರ್ಶನಕ್ಕೆ ಅಡ್ಡಿಯಿಲ್ಲ: ಸಿಎಂ ಬೊಮ್ಮಾಯಿ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರೂ ಕೂಡ ಮಾತನಾಡಿದ್ದು, ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಯಾವುದೇ ಅಡ್ಡಿ ಪಡಿಸಲು ಅವಕಾಶ ನೀಡುವುದಿಲ್ಲ. ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯವರೊಂದಿಗೆ ಮಾತನಾಡಿದ್ದೇನೆ. ತೊಂದರೆಯಾಗಿರುವಲ್ಲಿ ಕೂಡಲೇ ಸರಿಪಡಿಸಿ, ಅನಾವಶ್ಯಕವಾಗಿ ಜೇಮ್ಸ್ ಸಿನಿಮಾವನ್ನು ಯಾರೂ ಚಿತ್ರಮಂದಿರಗಳಿಂದ ತೆಗೆಯತಕ್ಕದ್ದಲ್ಲ. ಸಂಬಂಧಪಟ್ಟ ನಿರ್ಮಾಪಕರು, ಚಿತ್ರಮಂದಿರದವರಿಗೆ ಇದನ್ನು ಸರಿಪಡಿಸುವ ಅಧಿಕಾರವಿದೆ ಎಂದು ಹೇಳಿದರು.
ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ನಟ ಪುನೀತ್ ಜೀವನಗಾಥೆ: ಪ್ರಾಥಮಿಕ ತರಗತಿ ಪುಸ್ತಕದಲ್ಲಿ ದೊಡ್ಮನೆ ಹುಡುಗನ ಯಶೋಗಾಥೆ!
ಅಂತೆಯೇ ನಟ ಶಿವರಾಜ್ ಕುಮಾರ್ ಅವರ ಬಳಿಯೂ ಮಾತನಾಡಿದ್ದೇನೆ. ತೊಂದರೆ ಇದ್ದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಥವಾ ನನ್ನ ಗಮನಕ್ಕೆ ತರಬೇಕೆಂದು ತಿಳಿಸಿದ್ದೇನೆ. ಅವರೂ ಸಹ ಒಪ್ಪಿದ್ದಾರೆ. ಕಾಂಗ್ರೆಸ್ ಪಕ್ಷದವರು ಸಿನಿಮಾದಲ್ಲಿಯೂ ರಾಜಕಾರಣ ಮಾಡುವಷ್ಟು ಕೆಳಮಟ್ಟಕ್ಕೆ ಹೋಗಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.