
'ಕಸ್ತೂರಿ ಮಹಲ್' ಚಿತ್ರತಂಡ
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 'ಕಸ್ತೂರಿ ಮಹಲ್' ಸಿನಿಮಾ ಮೇ 13ರಂದು ಬಿಡುಗಡೆಯಾಲಿದೆ. ಇದು ನಿರ್ದೇಶಕ ದಿನೇಶ್ ಬಾಬು ಅವರ 50ನೇ ಸಿನಿಮಾ ಎನ್ನುವುದು ವಿಶೇಷ.
ಇದನ್ನೂ ಓದಿ: ಸುನಿ ನಿರ್ದೇಶನದ 'ಗತ ವೈಭವ'ದಲ್ಲಿ ದುಶ್ಯಂತ್ ಗೆ ಆಶಿಕಾ ರಂಗನಾಥ್ ನಾಯಕಿ?
ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ಈ ಹಾರರ್ ಸಿನಿಮಾದ ನಾಯಕಿ. ಕೊಟ್ಟಿಗೆಹಾರದ ಪರಿಸರದಲ್ಲಿ 'ಕಸ್ತೂರಿ ಮಹಲ್' ಚಿತ್ರೀಕರಣ ನಡೆಸಲಾಗಿದೆ. 'ಎರಡೂವರೆ ವರ್ಷಗಳ ನಂತರ ನನ್ನ ಅಭಿನಯದ ಚಿತ್ರ ತೆರೆಗೆ ಬರುತ್ತಿದೆ. ನೋಡಿ ಹರಸಿ' ಎಂದರು ಶಾನ್ವಿ ಶ್ರೀವಾಸ್ತವ್.
ಇದನ್ನೂ ಓದಿ: ಅಜಯ್ ರಾವ್ ನಟನೆಯ 'ಶೋಕಿವಾಲಾ' ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್!
ದಿನೇಶ್ ಬಾಬು ಅವರ ಹತ್ತಿರ ಹಾರಾರ್ ಸಿನಿಮಾ ಮಾಡೋಣ ಅಂತ ಹೇಳಿದ್ದೆ. ಉತ್ತಮ ಕಥೆ ಸಿದ್ದ ಮಾಡಿಕೊಂಡು ಸಿನಿಮಾ ಶುರು ಮಾಡಿದರು. ಇದೇ ಮೇ 13 ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ಮಾಪಕ ರವೀಶ್. ಸ್ಕಂದ, ಶ್ರುತಿ ಪ್ರಕಾಶ್, ವತ್ಸಲಾ ಮೋಹನ್, ಕಾಶಿಮಾ, ನೀನಾಸಂ ಅಶ್ವಥ್ ಸಿನಿಮಾದ ತಾರಾಗಣದಲ್ಲಿದ್ದಾರೆ. ರವೀಶ್ ಸಿನಿಮಾಗೆ ಹಣ ಹೂಡಿದ್ದಾರೆ.
ಇದನ್ನೂ ಓದಿ: ಬೆಳ್ಳಗಿದೀನಿ ಅಂತ ಸಿನಿಮಾ ಚಾನ್ಸ್ ಕಳಕೊಂಡಿದ್ದೀನಿ, ಬೆಳ್ಳಗಿರೋದ್ ತಪ್ಪಾ?: 'ಕಾಡ' ವಿಲನ್ ಶ್ರೀರಾಮ್