ಕೆಜಿಎಫ್ ಚಾಪ್ಟರ್ 2 ಟ್ರೈಲರ್: ಚಿತ್ರರಂಗದಲ್ಲಿ ಹೊಸ ದಾಖಲೆ, 24 ಗಂಟೆಗಳಲ್ಲಿ 109 ಮಿಲಿಯನ್ ಗೂ ಹೆಚ್ಚು ವೀಕ್ಷಣೆ!
ಭಾನುವಾರ ಪಂಚಭಾಷೆಗಳಲ್ಲಿ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿಯನದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದ್ದು, ಬಿಡುಗಡೆಯಾದ 24 ಗಂಟೆಗಳಲ್ಲಿ 109 ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಪಡೆಯುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.
Published: 29th March 2022 01:12 AM | Last Updated: 29th March 2022 01:26 AM | A+A A-

ಕೆಜಿಎಫ್ ಟ್ರೈಲರ್ ಚಿತ್ರ
ಬೆಂಗಳೂರು: ಭಾನುವಾರ ಪಂಚಭಾಷೆಗಳಲ್ಲಿ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿಯನದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದ್ದು, ಬಿಡುಗಡೆಯಾದ 24 ಗಂಟೆಗಳಲ್ಲಿ 109 ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಪಡೆಯುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.
ರಾಕಿಂಗ್ ಸ್ಟಾರ್ ಯಶ್ ಜೊತೆಗೆ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್ ಕೆಜಿಎಫ್ ಚಾಪ್ಟರ್ 2 ನಲ್ಲಿ ಅಭಿನಯಿಸಿದ್ದು, ಪಂಚ ಭಾಷೆಗಳಲ್ಲಿಯೂ ಟ್ರೈಲರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡದ ಟ್ರೇಲರ್ ಟ್ರೆಂಡಿಂಗ್ ನಲ್ಲಿ ನಂಬರ್ 1 ಸ್ಥಾನದಲ್ಲಿದೆ.
ಇದನ್ನೂ ವೀಕ್ಷಿಸಿ: ಯಶ್ ನಟನೆಯ ಕೆಜಿಎಫ್ 2 ಚಿತ್ರದ ಟ್ರೈಲರ್
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಟ್ರೇಡ್ ಅನಾಲಿಸ್ಟ್ ಮನೋಬಲ ವಿಜಯ್ ಬಾಲನ್, ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಕನ್ನಡದಲ್ಲಿ 18 ಮಿಲಿಯನ್, ತೆಲುಗಿನಲ್ಲಿ 20 ಮಿಲಿಯನ್, ಹಿಂದಿಯಲ್ಲಿ 51 ಮಿಲಿಯನ್, ತಮಿಳು 12 ಮಿಲಿಯನ್, ಮಲಯಾಳಂನಲ್ಲಿ 8 ಮಿಲಿಯನ್ ವೀಕ್ಷಣೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
Records.. Records.. Records..
— Manobala Vijayabalan (@ManobalaV) March 28, 2022
Rocky don't like it, He avoids, But Records likes Rocky!
He Cannot avoid it.
Kannada: 18M
Telugu: 20M
Hindi: 51M
Tamil: 12M
Malayalam: 8M#KGFChapter2Trailer #KGFChapter2 #Yash pic.twitter.com/dY1ali4Sqi