'ಗೀತಾ, ದೊರೆಸಾನಿ' ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ಚೇತನಾ ರಾಜ್ ಫ್ಯಾಟ್ ಸರ್ಜರಿ ವೇಳೆ ಸಾವು!
ಕನ್ನಡ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದ ಚೇತನಾ ರಾಜ್ ಎಂಬುವರು ನಿಧನರಾಗಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಆಸ್ಪತ್ರೆಯಲ್ಲೇ ಚೇತನಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Published: 17th May 2022 08:43 AM | Last Updated: 17th May 2022 01:13 PM | A+A A-

ನಟಿ ಚೇತನಾ ರಾಜ್
ಬೆಂಗಳೂರು: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಮೃತಪಟ್ಟಿದ್ದಾರೆ ಎಂದು ವೈದ್ಯರ ವಿರುದ್ಧ ಮೃತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ನಟಿ ಕುಟುಂಬ ವಾಸವಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.
ಬೆಂಗಳೂರಿನ ನವರಂಗ ಸರ್ಕಲ್ನಲ್ಲಿರುವ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಚೇತನಾ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಫ್ಯಾಟ್ ಸರ್ಜರಿ ನಡೆಯುವಾಗಲೇ ಚೇತನಾ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.