'ವಿಕ್ರಾಂತ್ ರೋಣ'ನಿಗೆ ಸಲ್ಮಾನ್ ಖಾನ್ ಸಾಥ್: ಉತ್ತರ ಭಾರತದ ವಿತರಣೆಗೆ ಸಲ್ಲು ಬಾಯ್ ಹೊಣೆ!
ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಜುಲೈ 28ಕ್ಕೆ ರಿಲೀಸ್ ಆಗುತ್ತಿದೆ. ಚಿತ್ರತಂಡದಿಂದ ಅಭಿಮಾನಿಗಳಿಗೆ ಹೊಸ ಅಪ್ಡೇಟ್ ಸಿಕ್ಕಿದೆ.
Published: 17th May 2022 08:56 AM | Last Updated: 17th May 2022 01:14 PM | A+A A-

ವಿಕ್ರಾಂತ್ ರೋಣ ಸ್ಟಿಲ್
ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಜುಲೈ 28ಕ್ಕೆ ರಿಲೀಸ್ ಆಗುತ್ತಿದೆ. ಚಿತ್ರತಂಡದಿಂದ ಅಭಿಮಾನಿಗಳಿಗೆ ಹೊಸ ಅಪ್ಡೇಟ್ ಸಿಕ್ಕಿದೆ.
'ವಿಕ್ರಾಂತ್ ರೋಣ' ಚಿತ್ರದ ಹಿಂದಿಯಲ್ಲಿ ಸಲ್ಮಾನ್ ಖಾನ್ ವಿತರಣೆಯ ಜವಾಬ್ದಾರಿ ಹೊತ್ತಿದ್ದಾರೆ. ಈ ಮೂಲಕ ಕಿಚ್ಚನ ಸಿನಿಮಾಗೆ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ.
ವಿಕ್ರಾಂತ್ ರೋಣಗೆ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ. ಕಿಚ್ಚನ ಚಿತ್ರದ ಹಿಂದಿಯಲ್ಲಿ ವಿತರಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ವಿಕ್ರಾಂತ್ ರೋಣ ಹಿಂದಿ ವರ್ಷನ್ ಅನ್ನು ಸಲ್ಮಾನ್ ಖಾನ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡ ಕೂಡ ರಿವೀಲ್ ಮಾಡಿದ್ದು, ಸಲ್ಮಾನ್ ಖಾನ್ ಕೂಡ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ವಿಕ್ರಾಂತ್ ರೋಣ 3ಡಿ ಅವತರಣಿಕೆಯನ್ನು ಹಿಂದಿಯಲ್ಲಿ ಪ್ರೆಸೆಂಟ್ ಮಾಡುತ್ತಿರುವುದು ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನ ಓದಿ: ವಿಕ್ರಾಂತ್ ರೋಣ ಚಿತ್ರದ ಪೋಸ್ಟರ್ ಹಂಚಿಕೊಂಡ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್!
ಇನ್ನು ಕಿಚ್ಚನ ಸಿನಿಮಾ ರಿಲೀಸ್ಗೂ ಮುನ್ನವೇ ಕಮಾಯಿ ಮಾಡಲು ಶುರು ಮಾಡಿದೆ. ಈಗಾಗಲೇ ವಿಕ್ರಾಂತ್ ರೋಣ ಚಿತ್ರದ ಓವರ್ಸೀಸ್ ರೈಟ್ಸ್ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಕಿಚ್ಚನ ಬಹುನಿರೀಕ್ಷಿ ಸಿನಿಮಾ ಇದೇ ಜುಲೈ 28ಕ್ಕೆ 3ಡಿಯಲ್ಲಿ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಸುದೀಪ್ ಜತೆ ಜಾಕ್ವೆಲಿನ್ ಫೆರ್ನಾಂಡಿಸ್ ನಿರೂಪ್ ಭಂಡಾರಿ, ನೀತಾ ಅಶೋಕ್, ಸೇರಿದಂತೆ ಹಲವರು ನಟಿಸಿದ್ದಾರೆ.
ಪ್ಯಾನ್-ವರ್ಲ್ಡ್ 3D ಚಿತ್ರವು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಮತ್ತು ಅರೇಬಿಕ್, ಜರ್ಮನ್, ರಷ್ಯನ್, ಮ್ಯಾಂಡರಿನ್, ಇಂಗ್ಲಿಷ್ ಮತ್ತು ಇತರ ಭಾಷೆಗಳಲ್ಲಿಯೂ ಬಿಡುಗಡೆಯಾಗುವ ನಿರೀಕ್ಷೆಯಿದೆ.
I am still spell bound by the visuals brother @KicchaSudeep Happy to present the Hindi version of #VikrantRona the biggest 3D experience in Indian cinema.@anupsbhandari @JackManjunath @SKFilmsOfficial @shaliniartss @InvenioF @ZeeStudios_ #VikrantRona3DJuly28 #VR3dJuly28 pic.twitter.com/C5ZJWvcfVK
— Salman Khan (@BeingSalmanKhan) May 16, 2022