'ಕನ್ನಡತಿ' ಸೀರಿಯಲ್ ಖ್ಯಾತಿಯ ಕಿರಣ್ ರಾಜ್ ನಟನೆಯ 'ಬಡ್ಡೀಸ್' ಸಿನಿಮಾ ಜೂನ್ 24ಕ್ಕೆ ರಿಲೀಸ್
'ಕನ್ನಡತಿ' ಧಾರಾವಾಹಿಯಲ್ಲಿ ಹರ್ಷ ಪಾತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕಿರಣ್ ರಾಜ್ ಅಭಿನಯದ 'ಬಡ್ಡೀಸ್' ಚಿತ್ರ ಜೂನ್ 24 ರಂದು ಬಿಡುಗಡೆಯಾಗುತ್ತಿದೆ.
Published: 18th May 2022 12:55 PM | Last Updated: 18th May 2022 01:23 PM | A+A A-

ಕಿರಣ್ ರಾಜ್
'ಕನ್ನಡತಿ' ಧಾರಾವಾಹಿಯಲ್ಲಿ ಹರ್ಷ ಪಾತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕಿರಣ್ ರಾಜ್ ಅಭಿನಯದ 'ಬಡ್ಡೀಸ್' ಚಿತ್ರ ಜೂನ್ 24 ರಂದು ಬಿಡುಗಡೆಯಾಗುತ್ತಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬಿಡುಗಡೆ ದಿನಾಂಕ ಘೋಷಣೆ ಹಾಗೂ ಲಿರಿಕಲ್ ಸಾಂಗ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕಿರಣ್ ರಾಜ್ ಅವರ ತಂದೆ, ತಾಯಿ ಹಾಗೂ ಅಭಿಮಾನಿ ಸಮರ್ಥ್ ಲಿರಿಕಲ್ ಸಾಂಗ್ ಬಿಡುಗಡೆ ಮಾಡಿದರು.
ಕಥೆ ಸಿದ್ಧ ಮಾಡಿಕೊಂಡು, ನಿರ್ಮಾಪಕರ ಹುಡುಕಾಟದಲ್ಲಿದ್ದಾಗ, ಸ್ನೇಹಿತರ ಮೂಲಕ ದುಬೈ ನಿವಾಸಿ ಭಾರತಿ ಶೆಟ್ಟಿ ಅವರ ಪರಿಚಯವಾಯಿತು. ಕಥೆ ಮೆಚ್ಚಿದ ಅವರು ನಿರ್ಮಾಣಕ್ಕೆ ಮುಂದಾದರು.ಇದೊಂದು ಸ್ನೇಹದ ಮಹತ್ವ ಸಾರುವ ಚಿತ್ರ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುವ ಕಥಾಹಂದರ. 'ಬಡ್ಡೀಸ್' ಎಂದರೆ ಕಾಲೇಜಿನಲ್ಲಿ ಈಗಿನ ಹುಡುಗರು ಸ್ನೇಹಿತರನ್ನು ಕರೆಯುವ ಪದ. ಕಿರಣ್ ರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ.
ಇದನ್ನೂ ಓದಿ: 'ಕನ್ನಡತಿ' ಧಾರಾವಾಹಿ ನಟ ಕಿರಣ್ ರಾಜ್ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ: 'ಬಡ್ಡೀಸ್' ಸಿನಿಮಾ ಮೂಲಕ ಎಂಟ್ರಿ
ನಟ ಗೋಪಾಲ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಒಂದೇ ಟೇಕ್ನಲ್ಲಿ ಈ ಚಿತ್ರದ ಹಾಡೊಂದರ ನೃತ್ಯ ನಿರ್ದೇಶನ ಮಾಡಿರುವುದಾಗಿ ನೃತ್ಯ ನಿರ್ದೇಶಕ ಧನಂಜಯ್ ತಿಳಿಸಿದರು. ಜ್ಯೂಡಿ ಸ್ಯಾಂಡಿ 'ಬಡ್ಡೀಸ್' ಹಾಡುಗಳಿಗೆ ಸಂಗೀತ ನೀಡಿದ್ದು, ಅಮೆರಿಕ ನಿವಾಸಿ ನಿಭಾ ಶೆಟ್ಟಿ ಛಾಯಾಗ್ರಹಣ ಮಾಡಿದ್ದಾರೆ.
ಒಂದು ಶಿಕಾರಿಯ ಕಥೆ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಸಿರಿ ಪ್ರಹಲ್ಲಾದ್ ಈ ಚಿತ್ರದಲ್ಲಿ ಕಿರಣ್ ರಾಜ್ ಜೊತೆ ನಟಿಸುತ್ತಿದ್ದಾರೆ. ಭಾರತಿ ಶೆಟ್ಟಿ ನಿರ್ಮಿಸಿರುವ ಬಡ್ಡೀಸ್ ಈ ಚಿತ್ರದ ಮೂಲಕ ನಿಭಾ ಶೆಟ್ಟಿ ಸಿನಿಮಾಟೋಗ್ರಾಫರ್ ಆಗಿ ಪಾದಾರ್ಪಣೆ ಮಾಡುತ್ತಿದ್ದಾರೆ.