ಸಂದೇಶ್ ಪ್ರೊಡಕ್ಷನ್ ನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಭುದೇವ; ವಿನೂ ವೆಂಕಟೇಶ್ ನಿರ್ದೇಶನ!
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ.
Published: 31st May 2022 12:15 PM | Last Updated: 31st May 2022 01:26 PM | A+A A-

ವಿನೂ ವೆಂಕಟೇಶ್ ಮತ್ತು ಪ್ರಭುದೇವ
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ.
ಬಹುಭಾಷಾ ನಟ ಪ್ರಭುದೇವ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಸೇರಿದಂತೆ ಸಾಕಷ್ಟು ಖ್ಯಾತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ರಚಿತಾ ರಾಮ್ ಜೊತೆ ಕೂಡ ಮಾತುಕತೆ ನಡೆಸಲಾಗುತ್ತಿದೆ. ಇವರ ಜೊತೆ ಮತ್ತೆ ಹಲವು ನಾಯಕಿಯರು ಇರಲಿರಲಿದ್ದಾರೆ.
ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುತ್ತಿರುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ. ಇದು ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯ 31 ನೇ ಚಿತ್ರ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ.
ವಿನೂ ವೆಂಕಟೇಶ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಜುಲೈ 5 ರಿಂದ ಆರಂಭವಾಗಲಿದೆ. ಅಂಡಮಾನ್, ನಿಕೋಬಾರ್, ಬೆಂಗಳೂರು, ಚೆನ್ನೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ಪ್ರಾಜೆಕ್ಟ್ನ ಭಾಗವಾಗಲು ನಾವು ವಿವಿಧ ಉದ್ಯಮಗಳ ಇತರ ಕೆಲವು ತಾರೆಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಚಿತ್ರದ ಶೀರ್ಷಿಕೆ ಮತ್ತು ಇತರ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುತ್ತೇವೆ' ಎಂದು ವಿನೂ ತಿಳಿಸಿದ್ದಾರೆ.
ಎಸ್ ಜೆ ಸೂರ್ಯ ನಟನೆಯ ತಮಿಳು ಸಿನಿಮಾ ಸಿಂಡ್ರೆಲ್ಲಾಗೆ ವಿನೂ ನಿರ್ದೇಶನ ಮಾಡಿದ್ದರು. ಪ್ರಭುದೇವ ನಟನೆಯ ಈ ಸಿನಿಮಾ ಸೈಕಾಲಾಜಿಕಲ್ ಥ್ರಿಲ್ಲರ್ ಆಗಿದ್ದು ಎಲ್ಲಾ ವರ್ಗದ ಪ್ರೇಕ್ಷಕರಿಗಾಗಿ ಸಿನಿಮಾ ಮಾಡಲಾಗುತ್ತಿದೆ ಎಂದು ನಿರ್ದೇಶ ವಿನೂ ತಿಳಿಸಿದ್ದಾರೆ.