ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ: ನಾಳೆಯಿಂದ ಗಂಧದ ಗುಡಿ ಚಿತ್ರದ ಟಿಕೆಟ್ ದರ ಇಳಿಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ಗುರುವಾರದವರೆಗೆ ಗಂಧದ ಗುಡಿ ಸಾಕ್ಷ್ಯ ಚಿತ್ರದ ಟಿಕೆಟ್ ದರ ಇಳಿಕೆ ಮಾಡಿದ್ದಾರೆ.
Published: 06th November 2022 08:13 PM | Last Updated: 07th November 2022 01:14 PM | A+A A-

ಗಂಧದ ಗುಡಿ ಚಿತ್ರದ ಪೋಸ್ಟರ್
ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ಗುರುವಾರದವರೆಗೆ ಗಂಧದ ಗುಡಿ ಸಾಕ್ಷ್ಯ ಚಿತ್ರದ ಟಿಕೆಟ್ ದರ ಇಳಿಕೆ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮಗಳ ಮೂಲಕ ಈ ಬಗ್ಗೆ ಮಾಹಿತಿ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು, ಗಂಧದ ಗುಡಿ ಅಪ್ಪು ಅವರ ಒಂದು ಕನಸು. ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ. ಈ ಸಿನಿಮಾ ಎಲ್ಲಾ ಕನ್ನಡಿಗರು ಅದರಲ್ಲೂ ಮಕ್ಕಳು ನೋಡಬೇಕು ಎಂಬುದು ಅಪ್ಪು ಉದ್ದೇಶವಾಗಿತ್ತು. ಹೀಗಾಗಿ ಗಂಧದ ಗುಡಿ ಚಿತ್ರದ ಟಿಕೆಟ್ ದರವನ್ನು 7-11-2022 ರಿಂದ 10-11-2022ರ ವರೆಗೆ ಚಿತ್ರಮಂದಿರಗಳಲ್ಲಿ 56 ರೂಪಾಯಿ ಹಾಗೂ ಮಲ್ಟಿಪ್ಲೆಕ್ಸ್ ಗಳಲ್ಲಿ 112 ರೂಪಾಯಿಗೆ ಇಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಪುನೀತ್ ರಾಜ್ ಕುಮಾರ್ ನಟನೆಯ ಸಾಕ್ಷ್ಯಚಿತ್ರ 'ಗಂಧದ ಗುಡಿ' ಬಿಡುಗಡೆ: ಮೊದಲ ದಿನ 1,800 ಶೋ
ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕು ಎಂದು ನಿರ್ಧಾರ ಮಾಡಿರುವುದಾಗಿ ಅಶ್ವಿನಿ ಪುನೀರ್ ರಾಜ್ ಕುಮಾರ್ ಅವರು ಹೇಳಿದ್ದಾರೆ.
ನಾಡಿನ ಜನತೆಯಲ್ಲಿ ನನ್ನ ಒಂದು ಮನವಿ...
— Ashwini Puneeth Rajkumar (@Ashwini_PRK) November 6, 2022
An appeal to all the people of the state.#GGKids #GGMovie #GandhadaGudi #DrPuneethRajkumar pic.twitter.com/tf01Kt2Alu