ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾ ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್

ಕಳೆದ ಕೆಲವು ದಿನಗಳಿಂದ, ಕಾಂತಾರ ಈಗ ದೊಡ್ಡ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಈ ಹಿಂದೆ ನವೆಂಬರ್ 4 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಚಿತ್ರವು ಪ್ರೀಮಿಯರ್ ಆಗಲಿದೆ ಎಂದು ವರದಿಯಾಗಿತ್ತು. ಇದೀಗ ಕಾಂತಾರ ಒಟಿಟಿ ಬಿಡುಗಡೆಯನ್ನು ಚಿತ್ರ ತಯಾರಕರು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ.
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾ ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾವು 2022ನೇ ವರ್ಷದ ಅತ್ಯಂತ ದೊಡ್ಡ ಹಿಟ್ ಚಿತ್ರಗಳಲ್ಲಿ ಒಂದಾಗಿದೆ. ನಾಯಕಿಯಾಗಿ ಸಪ್ತಮಿ ಗೌಡ ನಟಿಸಿರುವ ಸಿನಿಮಾವನ್ನು ಆರಂಭದಲ್ಲಿ ಕನ್ನಡದಲ್ಲಿ ಮಾತ್ರ ಬಿಡುಗಡೆ ಮಾಡಲಾಗಿತ್ತು. ಚಿತ್ರವು ಸಕಾರಾತ್ಮಕ ಪ್ರತಿಕ್ರಿಯೆ ಲಭ್ಯವಾದ ನಂತರ, ಕಾಂತಾರ ನಿರ್ಮಾಪಕರು ಹಿಂದಿ ಸೇರಿದಂತೆ ಬಹು ಭಾಷೆಗಳಲ್ಲಿ ಚಲನಚಿತ್ರವನ್ನು ಬಿಡುಗಡೆ ಮಾಡಿದರು.

ಕಳೆದ ಕೆಲವು ದಿನಗಳಿಂದ, ಕಾಂತಾರ ಈಗ ದೊಡ್ಡ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಈ ಹಿಂದೆ ನವೆಂಬರ್ 4 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಚಿತ್ರವು ಪ್ರೀಮಿಯರ್ ಆಗಲಿದೆ ಎಂದು ವರದಿಯಾಗಿತ್ತು. ಇದೀಗ ಕಾಂತಾರ ಒಟಿಟಿ ಬಿಡುಗಡೆಯನ್ನು ಚಿತ್ರ ತಯಾರಕರು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ.

ನವೆಂಬರ್ 24 ರಂದು ಕಾಂತಾರ ಪ್ರೀಮಿಯರ್

ಕಾಂತಾರ ಮುಂದಿನ ವಾರ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರೀಮಿಯರ್ ಆಗುವ ಸಾಧ್ಯತೆಯಿದೆ. ಮಾಧ್ಯಮಗಳ ವರದಿ ಪ್ರಕಾರ, ನವೆಂಬರ್ 24 ರಂದು ಒಟಿಟಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಆದರೆ, ನಿರ್ಮಾಪಕರಿಂದ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗುತ್ತಿದೆ.

ರಾಜ್ಯದಲ್ಲಿ ಸಿನಿಮಾ ಬಿಡುಗಡೆಯಾಗಿ 50 ದಿನ ಪೂರೈಸಿದ್ದರೂ ಕೂಡ ಇನ್ನೂ ಜನರು ಚಿತ್ರಮಂದಿರಗಳಿಗೆ ಬರುತ್ತಿದ್ದಾರೆ. ಚಿತ್ರದ ಕಲೆಕ್ಷನ್ ಚೆನ್ನಾಗಿದ್ದು, ಈ ಬಾರಿಯೂ ಒಟಿಟಿ ಬಿಡುಗಡೆಯನ್ನು ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನವೆಂಬರ್ 24 ಅನ್ನು ನಿಗದಿಪಡಿಸುವ ಮೊದಲು ತಯಾರಕರು ಒಟಿಟಿ ಬಿಡುಗಡೆ ದಿನಾಂಕವನ್ನು ಹಲವಾರು ಬಾರಿ ಮುಂದೂಡಿದ್ದಾರೆ.

ಕೆಜಿಎಫ್ ದಾಖಲೆಗಳನ್ನೂ ಪುಡಿ ಪುಡಿ ಮಾಡಿರುವ ಕಾಂತಾರ ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಅದ್ಭುತಗಳನ್ನು ಮಾಡಿದೆ ಮತ್ತು ಇದು ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳಲ್ಲಿ ಒಂದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com