ಸದ್ದಿಲ್ಲದೆ ನಡೆಯಿತಾ ವೈಷ್ಣವಿ ಗೌಡ ನಿಶ್ಚಿತಾರ್ಥ? ಎಂಗೇಜ್ ಮೆಂಟ್ ಫೋಟೋ ವೈರಲ್: ಶುಭಾಶಯ ಕೋರಿದ ಚಿತ್ರರಂಗದ ಗಣ್ಯರು!

ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 8 ಸ್ಪರ್ಧಿ ವೈಷ್ಣವಿ ಗೌಡ ನಿಶ್ಚಿತಾರ್ಥದ ಫೋಟೋ ವೈರಲ್ ಆಗಿದೆ, ವೈಷ್ಣವಿ ಗೌಡ ಹಾಗೂ ಹುಡುಗನೊಬ್ಬ ಹೂ ಮಾಲೆ ಧರಿಸಿ ನಿಂತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ಫೋಟೋ
ವೈರಲ್ ಆಗಿರುವ ಫೋಟೋ

ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 8 ಸ್ಪರ್ಧಿ ವೈಷ್ಣವಿ ಗೌಡ ನಿಶ್ಚಿತಾರ್ಥದ ಫೋಟೋ ವೈರಲ್ ಆಗಿದೆ, ವೈಷ್ಣವಿ ಗೌಡ ಹಾಗೂ ಹುಡುಗನೊಬ್ಬ ಹೂವಿನ ಮಾಲೆ ಧರಿಸಿ ನಿಂತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹುಡುಗನ ಪಕ್ಕ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಕೂಡ ಇದ್ದಾರೆ. ಎದುರಿನಲ್ಲಿ ಹೂವು ಹಣ್ಣುಗಳನ್ನು ಇಡಲಾಗಿದೆ. ಸದ್ಯ ವೈಷ್ಣವಿ ಗೌಡ ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಈ ಫೋಟೋದ ಅಸಲಿಯತ್ತೇನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಬಿಗ್ ಬಾಸ್​’ಗೆ ಬಂದಾಗ ವೈಷ್ಣವಿ ಗೌಡ ಅವರು ಮದುವೆ ಬಗ್ಗೆ ಸಾಕಷ್ಟು ಮಾತನಾಡಿದ್ದರು. ತಮಗೆ ಮದುವೆ ಆಗಬೇಕು ಎನ್ನುವ ಆಸೆ ಇದೆ ಎಂದು ಅನೇಕ ಬಾರಿ ಹೇಳಿಕೊಂಡಿದ್ದರು. ಈ ಕಾರಣಕ್ಕೆ ಬಿಗ್ ಬಾಸ್​ನಿಂದ ಹೊರ ಬಂದ ನಂತರದಲ್ಲಿ ಮದುವೆ ಆಫರ್​ಗಳು ಬರೋಕೆ ಆರಂಭ ಆಗಿದ್ದವು. ಈ ಬಗ್ಗೆ ಅವರು ಲೈವ್​ನಲ್ಲಿ ಹೇಳಿಕೊಂಡಿದ್ದೂ ಇದೆ. ‘ಕನ್ನಡ ಬಿಗ್ ಬಾಸ್ ಸೀಸನ್ 8’ ಪೂರ್ಣಗೊಂಡು ಒಂದು ವರ್ಷದ ಬಳಿಕ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಅಗ್ನಿಸಾಕ್ಷಿ’ ಧಾರಾವಾಹಿಯ ಸನ್ನಿಧಿ ಪಾತ್ರದ ಮೂಲಕ ಸಾಕಷ್ಟು ಫೇಮಸ್ ಆದವರು ನಟಿ ವೈಷ್ಣವಿ ಗೌಡ. ಅವರಿಗೆ ಈ ಧಾರಾವಾಹಿ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತ್ತು. ಆ ಬಳಿಕ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ಕ್ಕೆ ಕಾಲಿಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com