ನಟಿ ಅದಿತಿ ಪ್ರಭುದೇವ- ಯಶಸ್ ಅದ್ಧೂರಿ ವಿವಾಹ; ದಾಂಪತ್ಯ ಜೀವನಕ್ಕೆ ಪ್ರವೇಶ!

ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಇಂದು ಯಶಸ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
ಅದಿತಿ-ಯಶಸ್ ಮದುವೆ ಫೋಟೋ
ಅದಿತಿ-ಯಶಸ್ ಮದುವೆ ಫೋಟೋ

ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಇಂದು ಯಶಸ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ ನ ಗಾಯತ್ರಿ ವಿಹಾರ ಗ್ರ್ಯಾಂಡ್ ನಲ್ಲಿ ಮದುವೆ ಶಾಸ್ತ್ರ ಅದ್ಧೂರಿಯಾಗಿ ನಡೆಯಿತು. ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಹಾಗೂ ಗೆಳೆಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ ಮುಹೂರ್ತ 9.30 ರಿಂದ 10.32ರ ಶುಭ ಲಗ್ನದಲ್ಲಿ ಅದಿತಿ ಪ್ರಭುದೇವ-ಯಶಸ್ ವೈವಾಹಿಕ ಜೀವನಕ್ಕೆ ಕಾಲಿಟ್ಟರು. 

ನಿನ್ನೆ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ರಾಜಕೀಯ ಕ್ಷೇತ್ರದ ಹಲವು ಗಣ್ಯರು. ನಟ ಯಶ್, ರಾಧಿಕಾ ಪಂಡಿತ್, ಶ್ರೀನಗರ ಕಿಟ್ಟಿ ಸೇರಿದಂತೆ ಹಲವು ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. 

ಮದುವೆ ಖುಷಿಯಲ್ಲಿರುವ ಅದಿತಿ ನಟನೆಯ ತ್ರಿಬಲ್ ರೈಡಿಂಗ್ ಚಿತ್ರ ಬಿಡುಗಡೆಯಾಗಿದ್ದು ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com