ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ನಲ್ಲಿ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್?

ರಜನಿಕಾಂತ್ ನಟನೆಯ ನೆಲ್ಸನ್ ನಿರ್ದೇಶನದ ಜೈಲರ್‌ ಸಿನಿಮಾದಲ್ಲಿ ಶಿವರಾಜಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದು ಖಚಿತವಾಗಿದೆ. ಇದೀಗ ಸೆಂಚುರಿ ಸ್ಟಾರ್ ಶಿವಣ್ಣ ಮತ್ತೊಂದು ಬಿಗ್-ಬಜೆಟ್ ತಮಿಳು ಚಿತ್ರದಲ್ಲಿ ನಟಿಸುವ ಸಾಧ್ಯತೆಯಿದೆ.
ಶಿವರಾಜ್ ಕುಮಾರ್
ಶಿವರಾಜ್ ಕುಮಾರ್
Updated on

ರಜನಿಕಾಂತ್ ನಟನೆಯ ನೆಲ್ಸನ್ ನಿರ್ದೇಶನದ ಜೈಲರ್‌ ಸಿನಿಮಾದಲ್ಲಿ ಶಿವರಾಜಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದು ಖಚಿತವಾಗಿದೆ. ಇದೀಗ ಸೆಂಚುರಿ ಸ್ಟಾರ್ ಶಿವಣ್ಣ ಮತ್ತೊಂದು ಬಿಗ್-ಬಜೆಟ್ ತಮಿಳು ಚಿತ್ರದಲ್ಲಿ ನಟಿಸುವ ಸಾಧ್ಯತೆಯಿದೆ.

ಧನುಷ್-ಅರುಣ್ ಮಾಥೇಶ್ವರನ್ ಅವರ ಕ್ಯಾಪ್ಟನ್ ಮಿಲ್ಲರ್ ನಿರ್ಮಾಪಕರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಲು ಶಿವಣ್ಣ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿಗು ಬಂದಿದೆ. ಸತ್ಯಜ್ಯೋತಿ ಫಿಲ್ಮ್ಸ್‌ ನಿರ್ಮಾಣ ಮಾಡುತ್ತಿರುವ ಕ್ಯಾಪ್ಟನ್ ಮಿಲ್ಲರ್, ನಲ್ಲಿ ಸಂದೀಪ್ ಕಿಶನ್ ಮತ್ತು ಪ್ರಿಯಾಂಕಾ ಅರುಲ್ ಮೋಹನ್ ಕೂಡ ಇದ್ದಾರೆ.

ಸದ್ಯ ಸ್ಯಾಂಡಲ್ ವುಡ್ ನ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶಿವಣ್ಣನ ಜೊತೆ ಪ್ರೊಡಕ್ಷನ್ ಹೌಸ್ ಮಾತುಕತೆ ನಡೆಸುತ್ತಿದೆ. ಶಿವಣ್ಣ ವೇದ ಸಿನಿಮಾದ ಬಹುತೇಕ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಡಬ್ಬಿಂಗ್ ಕೂಡ ಮುಗಿಸಿದ್ದಾರೆ.

ಅವರು ಶೀಘ್ರದಲ್ಲೇ ಶ್ರೀನಿ-ಸಂದೇಶ್ ನಾಗರಾಜ್ ಸಿನಿಮಾ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಅವರೊಂದಿಗೆ ಯೋಗರಾಜ್ ಭಟ್ ಪ್ರಾಜೆಕ್ಟ್‌ನಲ್ಲಿಯೂ ಕೆಲಸ ಮಾಡಲಿದ್ದಾರೆ. ಶಿವಣ್ಣ ಒಪ್ಪಿಗೆ ನೀಡುವ ನಿರೀಕ್ಷೆ ಇದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ. ಕ್ಯಾಪ್ಟನ್ ಮಿಲ್ಲರ್ ಸ್ವಾತಂತ್ರ್ಯ ಪೂರ್ವದ ಕಥೆಯಾಗಿದ್ದು, ಶ್ರೇಯಸ್ ಕೃಷ್ಣ ಅವರ ಛಾಯಾಗ್ರಹಣ, ಜಿವಿ ಪ್ರಕಾಶ್ ಕುಮಾರ್ ಸಂಗೀತ ಮತ್ತು ನಾಗೂರನ್ ಸಂಕಲನವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com