ಮಗಳು ಜಾನಕಿ ಖ್ಯಾತಿಯ ಚಂದು ಭಾರ್ಗಿ ವಿಧಿವಶ: ರವಿ ಪ್ರಸಾದ್ ನಿಧನಕ್ಕೆ ಟಿ.ಎನ್ ಸೀತಾರಾಮ್ ಸಂತಾಪ

ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಪಾತ್ರದಲ್ಲಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ  ನಿಧನರಾಗಿದ್ದಾರೆ. ಈ ಬಗ್ಗೆ ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ರವಿ ಪ್ರಸಾದ್ ಮಂಡ್ಯ
ರವಿ ಪ್ರಸಾದ್ ಮಂಡ್ಯ

ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಪಾತ್ರದಲ್ಲಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ  ನಿಧನರಾಗಿದ್ದಾರೆ. ಈ ಬಗ್ಗೆ ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ನಟ ರವಿ ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ  ಬಿಜಿಎಸ್ ನಲ್ಲಿ ದಾಖಲಾಗಿದ್ದ ನಟ ರವಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇನ್ನು ಈ ಬಗ್ಗೆ ಫೇಸ್ಬುಕ್‌ನಲ್ಲಿ ಮಾಹಿತಿ ನೀಡಿರುವ ನಿರ್ದೇಶಕ ಸೀತರಾಮ್ "ಮಗಳು ಜಾನಕಿ ಯ 'ಚಂದು ಭಾರ್ಗಿ' ರವಿ ಅಸ್ತಂಗತ. ಇನ್ನೂ 42..ನಾಲ್ಕು ಜನ್ಮಕ್ಕಾಗುವಷ್ಟು ಪ್ರತಿಭೆ..ಅತ್ಯಂತ ಆಘಾತಕಾರಿ" ಎಂದು ಬರೆದಿದ್ದಾರೆ. ನಿರ್ದೇಶಕ ಸೀತರಾಮ್ ಅವರು ಆಸ್ಪತ್ರೆಗೆ ಭೇಟಿ ನೀಡಿ ರವಿ ಆರೋಗ್ಯ ಕೂಡ ವಿಚಾರಿಸಿದ್ದರು.

ಮಂಡ್ಯ ಮೂಲದ ನಟ ರವಿ ಅವರ ಸಂಪೂರ್ಣ ಹೆಸರು ರವಿ ಪ್ರಸಾದ್. ಖ್ಯಾತ ನಿರ್ದೇಶಕ ಟಿಎನ್ ಸೀತರಾಮ್ ಅವರ ಅನೇಕ ಧಾರಾವಾಹಿಗಳಲ್ಲಿ ರವಿ ಅವರು ನಟಿಸಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ರವಿ ಧಾರಾವಾಹಿ ಜೊತೆಗೆ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಎಂಎ ಎಲ್ ಎಲ್ ಬಿ ಓದಿರುವ ರವಿ ಅದ್ಭುತ ನಟನೆ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದರು.

ಟಿಎನ್‌ ಸೀತಾರಾಮ್‌ ಅವರ ಮಾಯಾಮೃಗ, ಮುಕ್ತ ಹಾಗೂ ಮಗಳು ಜಾನಕಿ ಧಾರವಾಹಿಗಳಲ್ಲಿ ನಟಿಸಿದ್ದ ರವಿ ಪ್ರಸಾದ್‌ ಅರ್ಧಾಂಗಿ ಹಾಗೂ ವರಮಹಾಲಕ್ಷ್ಮೀ ಮುಂತಾದ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com