'ಏಕ್ ಲವ್ ಯಾ' ಹೀರೋ ರಾಣಾ ಮುಂದಿನ ಸಿನಿಮಾಗೆ ವಿಜಯ್ ಈಶ್ವರ್ ಆ್ಯಕ್ಷನ್ ಕಟ್!

ಏಕ್ ಲವ್ ಯಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಾಣಾ ತಮ್ಮ ಮುಂದಿನ ಸಿನಿಮಾಗೆ ಸಿದ್ಧತೆ ನಡೆಸುತ್ತಿದ್ದಾರೆ. ತಮ್ಮ ಮುಂದಿನ ಚಿತ್ರಕ್ಕಾಗಿ ನಿರ್ದೇಶಕರನ್ನು ಫಿಕ್ಸ್ ಮಾಡಿದ್ದಾರೆ ಎನ್ನಲಾಗಿದೆ.
ರಾಣಾ ಮತ್ತು ವಿಜಯ್ ಈಶ್ವರ್
ರಾಣಾ ಮತ್ತು ವಿಜಯ್ ಈಶ್ವರ್

ಏಕ್ ಲವ್ ಯಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಾಣಾ ತಮ್ಮ ಮುಂದಿನ ಸಿನಿಮಾಗೆ ಸಿದ್ಧತೆ ನಡೆಸುತ್ತಿದ್ದಾರೆ. ತಮ್ಮ ಮುಂದಿನ ಚಿತ್ರಕ್ಕಾಗಿ ನಿರ್ದೇಶಕರನ್ನು ಫಿಕ್ಸ್ ಮಾಡಿದ್ದಾರೆ ಎನ್ನಲಾಗಿದೆ.

ಪ್ರೇಮ್ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ವಿಜಯ್ ಈಶ್ವರ್ ರಾಣಾ ಮುಂದಿನ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಪ್ರಾಜೆಕ್ಚ್ ಗೆ ಹಸಿರು ನಿಶಾನೆ ಸಿಕ್ಕಿದ ಹಿನ್ನೆಲೆಯಲ್ಲಿ ಚಿತ್ರ ತಂಡ ಈಗಾಗಲೇ ಪ್ರಿ ಪ್ರೊಡಕ್ಷನ್ ಕೆಲಸ ಆರಂಭಿಸಿದೆ. ಈ ಸಿನಿಮಾಗಾಗಿ ರಾಣಾ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ, ಲವರ್ ಬಾಯ್ ಮಾಸ್ ಹೀರೋ ಆಗಲಿದ್ದಾರೆಯೇ ಎಂಬುದಕ್ಕಾಗಿ ಕಾಯಬೇಕಾಗಿದೆ. ಶೀಘ್ರದಲ್ಲೇ ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com