ರಂಗಾಯಣ ರಘು ನಟನೆಯ ‘ಅಜ್ಞಾತವಾಸಿ’ ಚಿತ್ರದ ಟೀಸರ್ ರಿಲೀಸ್

ಗುಲ್ಟು ಖ್ಯಾತಿಯ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ಹಾಗೂ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ‘ಅಜ್ಞಾತವಾಸಿ' ಚಿತ್ರದ ಟೀಸರ್ ಶುಕ್ರವಾರ ಬಿಡುಗಡೆಯಾಗಿದೆ.
ಅಜ್ಞಾತವಾಸಿ ಚಿತ್ರದ ಸ್ಟಿಲ್.
ಅಜ್ಞಾತವಾಸಿ ಚಿತ್ರದ ಸ್ಟಿಲ್.

ಗುಲ್ಟು ಖ್ಯಾತಿಯ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ಹಾಗೂ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ‘ಅಜ್ಞಾತವಾಸಿ' ಚಿತ್ರದ ಟೀಸರ್ ಶುಕ್ರವಾರ ಬಿಡುಗಡೆಯಾಗಿದೆ.

ಜನಾರ್ದನ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಹೇಮಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದು, ರಘು ಅವರೊಂದಿಗೆ ನಟಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ ತಾರಾಗಣದಲ್ಲಿ ಇದ್ದಾರೆ.

ರಂಗಾಯಣ ರಘು ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರೆ, ಸಿದ್ದು ಮೂಲಿಮನಿ ಹಾಗೂ ಪಾವನ ಗೌಡ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅಜ್ಞಾನವಾತಿ ಚಿತ್ರವನ್ನು ವಿಭಿನ್ನ ಚಿತ್ರವಾಗಿದ್ದು, ಕೊಲೆಗಾರನ ಕೊಲೆಯ ಮೊದಲು ಮತ್ತು ನಂತರದ ಮನಸ್ಥಿತಿಯನ್ನು ತೋರಿಸಲು ಯತ್ನಿಸಿದ್ದೇವೆಂದು ಜನಾರ್ದನ್ ಚಿಕ್ಕಣ್ಣ ಅವರು ಹೇಳಿದ್ದಾರೆ.

ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದು, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದಲ್ಲಿ ರಂಗಾಯಣ ರಘು ಜೊತೆಗೆ ಪಾವನಾ ಗೌಡ, ರವಿಶಂಕರ್ ಗೌಡ, ಶರತ್ ಲೋಹಿತಾಶ್ವ ಹಾಗೂ ಸಿದ್ದು ಮೂಲಿಮನಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com