ಕನ್ನಡದ 'ಕೆಡಿ' ಸಿನಿಮಾ ಶೂಟಿಂಗ್ ವೇಳೆ ಅವಘಡ; ಬಾಲಿವುಡ್ ನಟ ಸಂಜಯ್ ದತ್‌ಗೆ ಗಾಯ

ಸದ್ಯ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕನ್ನಡದ ಪ್ಯಾನ್-ಇಂಡಿಯಾ ಸಿನಿಮಾ 'ಕೆಡಿ' ಚಿತ್ರೀಕರಣ ನಡೆಸುತ್ತಿದ್ದು, ಬಾಲಿವುಡ್ ಸೂಪರ್‌ಸ್ಟಾರ್ ಸಂಜಯ್ ದತ್ ಅವರು ಬಾಂಬ್ ಸ್ಫೋಟದ ಸರಣಿಯ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ.
ಸಂಜಯ್ ದತ್
ಸಂಜಯ್ ದತ್
Updated on

ಬೆಂಗಳೂರು: ಸದ್ಯ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕನ್ನಡದ ಪ್ಯಾನ್-ಇಂಡಿಯಾ ಸಿನಿಮಾ 'ಕೆಡಿ' ಚಿತ್ರೀಕರಣ ನಡೆಸುತ್ತಿದ್ದು, ಬಾಲಿವುಡ್ ಸೂಪರ್‌ಸ್ಟಾರ್ ಸಂಜಯ್ ದತ್ ಅವರು ಬಾಂಬ್ ಸ್ಫೋಟದ ಸರಣಿಯ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಬಾಂಬ್ ಸ್ಫೋಟದ ದೃಶ್ಯವನ್ನು ಚಿತ್ರೀಕರಿಸುವಾಗ ಸಂಜಯ್ ದತ್ ಅವರ ಮೊಣಕೈ, ಕೈ ಮತ್ತು ಮುಖದ ಮೇಲೆ ಗಾಯಗಳಾಗಿವೆ ಎಂದು ಮೂಲಗಳು ವಿವರಿಸಿವೆ. ಘಟನೆ ನಂತರ ಚಿತ್ರದ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ.

ಫೈಟ್ ಮಾಸ್ಟರ್ ಡಾ. ರವಿವರ್ಮ ಚಿತ್ರಕ್ಕೆ ಫೈಟ್ ಕಂಪೋಸ್ ಮಾಡುತ್ತಿದ್ದರು. ಘಟನೆ ಇತ್ತೀಚೆಗಷ್ಟೇ ಬೆಳಕಿಗೆ ಬಂದಿದ್ದು, ಘಟನೆಯ ನಿಖರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಗಾಯಗಳಿಂದ ಸಂಜಯ್ ದತ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಚಿತ್ರರಂಗದ ಮೂಲಗಳು ವಿವರಿಸಿವೆ.

ಕೆಜಿಎಫ್ ಅಧ್ಯಾಯ 1 ಮತ್ತು 2ರ ನಂತರ, ಆ್ಯಕ್ಷನ್ ಹೀರೋ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದಲ್ಲಿ ಸಂಜಯ್ ದತ್ ಅವರು ಖಳನಾಯಕನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. 

'ಕೆಡಿ' ಚಿತ್ರವನ್ನು ಪ್ರೇಮ್ ನಿರ್ದೇಶಿಸಿದ್ದು, ಕೆವಿಎನ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ. ಚಿತ್ರದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com