‘ಏನಮ್ಮಿ, ಏನಮ್ಮಿ...’ ಬಳಿಕ ಮತ್ತೊಂದು ಹಿಟ್​ ಹಾಡು ನೀಡಿದ ರಚಿತಾ ರಾಮ್-ಸತೀಶ್ ನೀನಾಸಂ: 'ಮ್ಯಾಟ್ನಿ’ ಗೀತೆಗೆ ಮರುಳಾದ ಫ್ಯಾನ್ಸ್!

2018ರಲ್ಲಿ ತೆರೆಕಂಡ ಅಯೋಗ್ಯ ಚಿತ್ರದ ‘ಏನಮ್ಮಿ ಏನಮ್ಮಿ..’ ಹಾಡಿಗೆ ಕೇಳುಗರು ಮನಸೋತಿದ್ದರು. ಸತೀಶ್​ ನೀನಾಸಂ ಮತ್ತು ರಚಿತಾ ರಾಮ್​ ಅವರು ಜೋಡಿಯಾಗಿ ಕಾಣಿಸಿಕೊಂಡ ಆ ಗೀತೆ ಇಂದಿಗೂ ಟ್ರೆಂಡಿಂಗ್​ನಲ್ಲಿ ಇದೆ. ಇದೀಗ ಇದೇ ಜೋಡಿಯ ಮತ್ತೊಂದು ಸಿನಿಮಾದ ಹಾಡಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಮ್ಯಾಟ್ನಿ ಸಿನಿಮಾದ ಸ್ಟಿಲ್.
ಮ್ಯಾಟ್ನಿ ಸಿನಿಮಾದ ಸ್ಟಿಲ್.

2018ರಲ್ಲಿ ತೆರೆಕಂಡ ಅಯೋಗ್ಯ ಚಿತ್ರದ ‘ಏನಮ್ಮಿ ಏನಮ್ಮಿ..’ ಹಾಡಿಗೆ ಕೇಳುಗರು ಮನಸೋತಿದ್ದರು. ಸತೀಶ್​ ನೀನಾಸಂ ಮತ್ತು ರಚಿತಾ ರಾಮ್​ ಅವರು ಜೋಡಿಯಾಗಿ ಕಾಣಿಸಿಕೊಂಡ ಆ ಗೀತೆ ಇಂದಿಗೂ ಟ್ರೆಂಡಿಂಗ್​ನಲ್ಲಿ ಇದೆ. ಇದೀಗ ಇದೇ ಜೋಡಿಯ ಮತ್ತೊಂದು ಸಿನಿಮಾದ ಹಾಡಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮ್ಯಾಟ್ನಿ ಚಿತ್ರದ ಚಿತ್ರ ತಂಡ ಇತ್ತೀಚೆಗೆ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿದ್ದು,  ‘ಸಂಜೆ ಮೇಲೆ ಸುಮ್ನೆ ಫೋನು ಮಾಡ್ಲ ನಿಂಗೆ’ ಎಂಬ ಹಾಡಿಗೆ ಕೇಳುಗರು ಮರಳಾಗಿದ್ದಾರೆ.

ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಹಾಗೂ ವಿಜಯ್ ಪ್ರಕಾಶ್ ಹಾಡಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.

ಹಾಡಿನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸತೀಶ್ ನೀನಾಸಂ ಅವರು, ಬಹಳ ಅದ್ಭುತವಾದ ಹಾಡು. ಕಲಾ ನಿರ್ದೇಶನ, ನೃತೃ ನಿರ್ದೇಶನ, ಛಾಯಾಗ್ರಹಣ ಎಲ್ಲವೂ ಚೆನ್ನಾಗಿದೆ.  ನಾನೊಬ್ಬ ಪ್ರೇಕ್ಷಕನಾಗಿ ನೋಡಿದಾಗ ಈ ಹಾಡು ಬಹಳ ಚೆನ್ನಾಗಿದೆ ಎಂದೆನಿಸುತ್ತದೆ. ನನ್ನ ಕೆರಿಯರ್ ನಲ್ಲಿ ಇದು ಬೆಸ್ಟ್ ಸಾಂಗ್. ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಅವರಿಗೆ ಬಹಳ ತೊಂದರೆ ಕೊಟ್ಟಿದ್ದೇನೆ. ಅವರು ಅಷ್ಟೇ ಚೆನ್ನಾಗಿ ಹಾಡು ಮಾಡಿದ್ದಾರೆ. ಈ ಹಾಡನ್ನು ಮೊದಲು ಅವರೇ ಹಾಡಿದ್ದರು. ಎಲ್ಲರೂ ಇಷ್ಟಪಟ್ಟಿದ್ದರು. ಆದರೂ ಈ ಹಾಡನ್ನು ವಿಜಯಪ್ರಕಾಶ್ ಹಾಡಿದರೆ ಚೆನ್ನಾಗಿರುತ್ತದೆ ಎಂದೆನಿಸಿತು. ಅದಕ್ಕೆ ಪೂರ್ಣಚಂದ್ರ ಅವರು ಒಪ್ಪಿಕೊಂಡು ವಿಜಯಪ್ರಕಾಶ್ ಅವರಿಂದ ಹಾಡಿಸಿದ್ದಾರೆ ಎಂದು ಹೇಳಿದರು.

ನಿರ್ದೇಶಕ ಮನೋಹರ್ ಅವರು ಕಥೆ ಹೇಳಿದಾಗ ತಕ್ಷಣ ಒಪ್ಪಿಕೊಂಡೆ. ಬಹಳ ಚೆನ್ನಾಗಿ ಕಥೆ ಮಾಡಿಕೊಂಡಿದ್ದಾರೆ. ಅಯೋಗ್ಯ ನಂತರ ನಾನು ಮತ್ತು ರಚಿತಾ ಒಟ್ಟಿಗೆ ಅಭಿನಯಿಸಿರುವ ಚಿತ್ರವಿದು. ಈ ಚಿತ್ರದ ಕಥೆ ಕೇಳಿದಾಗ, ಈ ಕಥೆಗೆ ರಚಿತಾ ರಾಮ್ ಅವರೇ ಸೂಕ್ತ ಅನಿಸಿತು. ನಂತರ ಮತ್ತೊಬ್ಬ ನಾಯಕಿಯಾಗಿ ಅದಿತಿ ಚಿತ್ರತಂಡ ಸೇರಿದರು.

ಈಗಾಗಲೇ ರಚಿತಾ ರಾಮ್ ಅವರು ಈ ಚಿತ್ರದಲ್ಲಿದ್ದಾರೆ.  ಒಬ್ಬರು ಇರುವಾಗ ಅದಿತಿ ಒಪ್ಪುತ್ತಾರಾ ಎಂಬ ಗೊಂದಲವಿತ್ತು. ಅವರು ಒಂದೇ ಮಾತಿಗೆ ಒಪ್ಪಿಕೊಂಡರು. ನಾಗಭೂಷಣ್, ಶಿವರಾಜ್ ಕೆ.ಆರ್. ಪೇಟೆ, ಪೂರ್ಣ ಎಲ್ಲರೂ ಸ್ನೇಹಿತರು. ಎಲ್ಲರೂ ಚೆನ್ನಾಗಿ ಮಾಡಿದ್ದಾರೆ. ಮುಂದೆ ನನ್ನ ಹಾಗೂ ಅದಿತಿ ಅವರ ಇನ್ನೊಂದು ಹಾಡು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಸೆಪ್ಟೆಂಬರ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಮ್ಯಾಟ್ನಿ ಚಿತ್ರವನ್ನು ಯುವ ನಿರ್ದೇಶಕ ಮನೋಹರ್ ಕಾಂಪಲ್ಲಿ ನಿರ್ದೇಶನ ಮಾಡಿದ್ದು, ಅದ್ಧೂರಿ ವೆಚ್ಚದಲ್ಲಿ ಪಾರ್ವತಿ ಎಸ್. ಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಸುಧಾಕರ್‌ ಛಾಯಾಗ್ರಹಣ, ಕೆ. ಎಂ. ಪ್ರಕಾಶ್‌ ಸಂಕಲನವಿದೆ. ಚಿತ್ರದಲ್ಲಿ ನಾಗಭೂಷಣ್ ಹಾಗೂ ಶಿವರಾಜ್ ಕೆ.ಆರ್ ಪೇಟೆಯವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com