'ಎವರ್ ಗ್ರೀನ್ ಸುಂದರಿ' ಜಯಪ್ರದಾಗೆ ಆರು ತಿಂಗಳು ಜೈಲು ಶಿಕ್ಷೆ: 5 ಸಾವಿರ ರು. ದಂಡ ವಿಧಿಸಿದ ಕೋರ್ಟ್!

ಜನಪ್ರಿಯ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ಎಗ್ಮೋರ್ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಜಯಪ್ರದಾ
ಜಯಪ್ರದಾ
Updated on

ಜನಪ್ರಿಯ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ಎಗ್ಮೋರ್ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಚೆನ್ನೈನ ರಾಯಪೇಟಾದಲ್ಲಿ ಆಕೆಯ ಒಡೆತನದ ಚಿತ್ರಮಂದಿರದ ನೌಕರರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಆಕೆಗೆ 5,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ (ESI) ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಇಎಸ್​ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು.

ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್​ನ ಕುರ್ಚಿ, ಪ್ರೊಜೆಕ್ಟರ್​ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.

ಚೆನ್ನೈನಲ್ಲಿ ಜಯಪ್ರದಾ ಅವರು ರಾಮ್​ ಕುಮಾರ್​ ಮತ್ತು ರಾಜ ಬಾಬು ಜೊತೆ ಸೇರಿ ಎರಡು ಚಿತ್ರಮಂದಿರಗಳನ್ನು ನಡೆಸುತ್ತಿದ್ದರು. ಅಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್​ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು.

ಆದರೆ ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಜಯಪ್ರದಾ ಪಾವತಿಸುತ್ತಿರಲಿಲ್ಲ. ತಮಗೆ ತಮ್ಮ ಪಾಲಿನ ಇಎಸ್​ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ತಕರಾರು ತೆಗೆದಿದ್ದರು. ಆಗ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ದೂರು ದಾಖಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com