ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ವಿಡಿಯೋ ಲೀಕ್ ಮಾಡುವ ಬೆದರಿಕೆ ಆರೋಪ: ನಟ ನಿರ್ಮಾಪಕ ವಿರೇಂದ್ರ ಬಾಬು ಬಂಧನ

ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ನಟ ವಿರೇಂದ್ರ ಬಾಬು
ನಟ ವಿರೇಂದ್ರ ಬಾಬು

ಬೆಂಗಳೂರು: ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕೊಡಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದ ಘಟನೆ ಇದಾಗಿದೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ್ದಾರೆ ವೀರೇಂಂದ್ರ ಬಾಬು. ಬಳಿಕ ಅವರ ಮೇಲೆ ನಟ ಅತ್ಯಾಚಾರ ಮಾಡಿದ್ದಾರೆ. ಇದನ್ನು ಅವರು ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ವಿರೇಂದ್ರ ಬಾಬು, ಹಣ ಕೊಡದೇ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದರು.

ಇದೀಗ ಕಳೆದ ಜುಲೈ 30 ರಂದು ಮತ್ತೆ ತನಗೆ ಬೆದರಿಕೆ ಹಾಕಿದ್ದಾನೆ ಎಂದು ಅದೇ ಮಹಿಳೆ ಆರೋಪಿಸಿದ್ದಾರೆ. ಮಹಿಳೆಯನ್ನ ಕಾರಿನಲ್ಲಿ ಸುತ್ತಾಡಿಸಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಂಡಿರುವ ಆರೋಪ‌‌ ಮಾಡಿದ್ದಾಳೆ. ಈ ಆರೋಪ ಸಂಬಂಧ ವೀರಪ್ಪ ಬಾಬು ಹಾಗೂ ಆತನ ಸ್ನೇಹಿತರ ಮೇಲೆ ಎಫ್ಐಆರ್ ದಾಖಲಿಸಿ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com