ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ: ತಕ್ಷಣ ವಿಚಾರಣೆಗೆ ಹಾಜರಾಗಲು ನೋಟಿಸ್

ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ.
ಉಪೇಂದ್ರ
ಉಪೇಂದ್ರ

ಬೆಂಗಳೂರು: ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ.

ಪ್ರಕರಣ ಸಂಬಂಧ ತಕ್ಷಣ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರ ಅವರಿಗೆ ಸೂಚಿಸಲಾಗಿದೆ. ನಟನ ಕತ್ರಿಗುಪ್ಪೆ ಮತ್ತು ಸದಾಶಿವನಗರ ಮನೆಗೆ ;ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ನೋಟಿಸ್ ನೀಡಿದ್ದಾರೆ. ಸದ್ಯ ವಾಟ್ಸ್​​ಆ್ಯಪ್ ಮೂಲಕ ನೋಟಿಸ್ ರವಾನೆ ಮಾಡಲಾಗಿದೆ. ಪ್ರಕರಣ ಸಂಬಂಧ ಸ್ಥಳ‌ ಮಹಜರು ನಡೆಯಲಿದೆ. ವಿಡಿಯೋ ಮಾಡಿದ ಜಾಗದ ಸ್ಥಳ ಮಹಜರನ್ನು ಪೊಲೀಸರು ಮಾಡಲಿದ್ದಾರೆ. ದೂರುದಾರ ಸಮ್ಮುಖದಲ್ಲೇ ಈ ಪ್ರಕ್ರಿಯೆ ನಡೆಯಲಿದೆ.

ತಪ್ಪಿನ ಅರಿವಾದ ಬಳಿಕ ಉಪೇಂದ್ರ ಕ್ಷಮೆ ಕೇಳಿದ್ದರು. ಆದರೆ, ಈ ತಪ್ಪನ್ನು ಕೆಲವರು ಮನ್ನಿಸಿಲ್ಲ. ಅವರ ವಿರುದ್ಧ ಕೆಲವರು ಕಾನೂನು ಸಮರ ಸಾರಿದ್ದಾರೆ. ಇದರಿಂದ ನಟನಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚೆಗೆ ಲೈವ್​ನಲ್ಲಿ ಮಾತನಾಡಿದ್ದ ಉಪೇಂದ್ರ ಅವರು ಹೊಲಗೇರಿ ಶಬ್ದ ಬಳಕೆ ಮಾಡಿದ್ದರು. ಆಕ್ಷೇಪಾರ್ಹ ಪದ ಬಳಕೆ ಪ್ರಕರಣದಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com