'ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ: ದ್ವೇಷದ ಆಟಕ್ಕೆ ಹೈಕೋರ್ಟ್ ತಡೆ'

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ಕೋರಿ ನಟ ಉಪೇಂದ್ರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಚಂದನ್ ಗೌಡರ್ ಅವರ ನೇತೃತ್ವದ ನ್ಯಾಯಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಉಪೇಂದ್ರ
ಉಪೇಂದ್ರ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ಕೋರಿ ನಟ ಉಪೇಂದ್ರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಚಂದನ್ ಗೌಡರ್ ಅವರ ನೇತೃತ್ವದ ನ್ಯಾಯಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇದರ ಬೆನ್ನಲ್ಲೇ ನಟ ಉಪೇಂದ್ರ ಟ್ವೀಟ್‌ ಮಾಡಿದ್ದಾರೆ. “ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ, ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆʼʼಎಂದು ಧನ್ಯವಾದ ಸೂಚಿಸಿದ್ದಾರೆ.

ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ, ತಾಯಿ ನನಗೆ ಕೊಡೆ. ಧನ್ಯವಾದಗಳು ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಆಗಸ್ಟ್‌ 12ರಂದು ಪ್ರಜಾಕೀಯ ಪಕ್ಷಕ್ಕೆ 6 ವರ್ಷವಾದ ಪ್ರಯುಕ್ತ ಉಪೇಂದ್ರ ಅವರು ತಮ್ಮ ಅಭಿಮಾನಿಗಳ ಜತೆ ಸಂವಾದ ನಡೆಸಿದ್ದರು. ಈ ವೇಳೆ ಮಾತಿನ ಭರದಲ್ಲಿ ʼಊರು ಅಂದ್ಮೇಲೆ ಹೊಲೆಗೇರಿ ಇರುತ್ತಲ್ಲಾ ಹಾಗೆ..ʼ ಎಂದು ಹೇಳಿದ್ದರು. ಇದು ಸೋಷಿಯಲ್‌ ಮೀಡಿಯಾದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com