D51: ಧನುಷ್ ನಟನೆಯ ಹೊಸ ತಮಿಳು ಸಿನಿಮಾಗೆ ಕಿರಿಕ್ ಪಾರ್ಟಿ ಬ್ಯೂಟಿ ರಶ್ಮಿಕಾ ಮಂದಣ್ಣ ನಾಯಕಿ!

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ಅವರ ಮುಂದಿನ ಸಿನಿಮಾದಲ್ಲಿ ನಟ ಧನುಷ್ ಜೊತೆಗೆ ನಟಿಸಲು ನಟಿ ರಶ್ಮಿಕಾ ಮಂದಣ್ಣ ಸಿದ್ಧರಾಗಿದ್ದಾರೆ. ಧನುಷ್ ಅವರೊಂದಿಗೆ ಇದೇ ಮೊದಲ ಬಾರಿಗೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ.
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Updated on

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ಅವರ ಮುಂದಿನ ಸಿನಿಮಾದಲ್ಲಿ ನಟ ಧನುಷ್ ಜೊತೆಗೆ ನಟಿಸಲು ನಟಿ ರಶ್ಮಿಕಾ ಮಂದಣ್ಣ ಸಿದ್ಧರಾಗಿದ್ದಾರೆ. ಧನುಷ್ ಅವರೊಂದಿಗೆ ಇದೇ ಮೊದಲ ಬಾರಿಗೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ.

ಧನುಷ್ ಅವರ 51ನೇ ಸಿನಿಮಾ 'ಡಿ51' ಅನ್ನು ಕಳೆದ ತಿಂಗಳು ನಟನ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಿಸಲಾಗಿತ್ತು.
ಅಮಿಗೋಸ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿಮಾಸ್ ಎಲ್‌ಎಲ್‌ಪಿ ಮೂಲಕ ಸುನೀಲ್ ನಾರಂಗ್ ಮತ್ತು ಪುಸ್ಕುರ್ ರಾಮ್ ಮೋಹನ್ ರಾವ್ ಈ ಚಿತ್ರವನ್ನು ನಿರ್ಮಿಸಲಿದ್ದಾರೆ.

'ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ನಟ ಧನುಷ್, ಶೇಖರ್ ಕಮ್ಮುಲ ಮತ್ತು ಶ್ರೀ ವೆಂಕಟೇಶ್ವರ ಸಿನಿಮಾಸ್ ಎಲ್‌ಎಲ್‌ಪಿ ಜೊತೆಗೆ ರಶ್ಮಿಕಾ ಇದೇ ಮೊದಲ ಬಾರಿಗೆ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ' ಎಂದು ಚಿತ್ರತಂಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಚಿತ್ರದ ಇನ್ನುಳಿದ ತಾರಾಗಣ ಮತ್ತು ತಾಂತ್ರಿಕ ಬಳಗದ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.

ರಶ್ಮಿಕಾ ಈ ವರ್ಷದ ಆರಂಭದಲ್ಲಿ ನೆಟ್‌ಫ್ಲಿಕ್ಸ್‌ನ 'ಮಿಷನ್ ಮಜ್ನು' ಮೂಲಕ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.

ರಶ್ಮಿಕಾ ಮಂದಣ್ಣ ಅಭಿನಯದ ರಣಬೀರ್ ಕಪೂರ್ ಜೊತೆಗಿನ 'ಅನಿಮಲ್' ಮತ್ತು ಅಲ್ಲು ಅರ್ಜುನ್ ಜೊತೆಗಿನ 'ಪುಷ್ಪ 2: ದಿ ರೂಲ್' ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com