ಅದೃಷ್ಟಕ್ಕಾಗಿ ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ: ಕನಸಿನ ರಾಣಿ ಹೇಳಿದ್ದೇನು?

ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್​ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್​ಕುಮಾರ್, ವಿಷ್ಣುವರ್ಧನ್​, ಯಶ್​ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್​ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
ರಾಧನಾ ರಾಮ್
ರಾಧನಾ ರಾಮ್

ಬೆಂಗಳೂರು: ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್​ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್​ಕುಮಾರ್, ವಿಷ್ಣುವರ್ಧನ್​, ಯಶ್​ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್​ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅದೇ ರೀತಿಯ ಈಗ ಮಾಲಾಶ್ರೀ ಅವರ ಮಗಳು ಕೂಡ ತಮ್ಮ ಹೆಸರನ್ನು ಚೇಂಜ್​ ಮಾಡಿಕೊಂಡಿದ್ದಾರೆ

<strong>ಆರಾಧನಾ</strong>
ಆರಾಧನಾ

ನಟಿ ಮಾಲಾಶ್ರೀ - ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ ಎಂದು ಬದಲಿಸಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ  ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ.

ನಾನು, ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ. ಈ ಹೆಸರು ಬರೀ ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೇ ಆರಾಧನಾ.  ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳಬೇಕೆಂದು ಮಾಲಾಶ್ರೀ ಅವರು ವಿನಂತಿಸಿದ್ದಾರೆ.

ಹೆಸರು ಬದಲಾವಣೆ ಮಾಡಿಕೊಂಡಿರುವ ಆರಾಧನಾ ಅವರು ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಈ ವಿಷಯ ತಿಳಿಸಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ರಾಧನಾ ರಾಮ. ಇಂದಿನಿಂದ ನನ್ನ ಹೆಸರು ಆರಾಧನಾ ಎಂದು ನಿಮಗೆ ಸುದ್ದಿ ನೀಡಲು ನಾನು ಬಯಸುತ್ತೇನೆ. ಈ ಬದಲಾವಣೆಗಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ನೀಡಬೇಕೆಂದು ನಾನು ಕೇಳುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ತುಂಬಾ ಧನ್ಯವಾದಗಳು ಮತ್ತು ಇದು ಯಾವಾಗಲೂ ನನ್ನೊಂದಿಗೆ ಸದಾ ಇರಲಿ ಎಂದು ಕೇಳಿಕೊಳ್ಳುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com