ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಹರ್ಷಿಕಾ ಪೂಣಚ್ಚ-ಭುವನ್!

ಕನ್ನಡದ ನಟಿ ಹರ್ಷಿಕಾ ಪೂಣಚ್ಚ ಮತ್ತು ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
ಭುವನ್-ಹರ್ಷಿಕಾ ಪೂಣಚ್ಚ
ಭುವನ್-ಹರ್ಷಿಕಾ ಪೂಣಚ್ಚ

ಕನ್ನಡದ ನಟಿ ಹರ್ಷಿಕಾ ಪೂಣಚ್ಚ ಮತ್ತು ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ಕೊಡವ ಸಂಪ್ರದಾಯದಂತೆ ವಿವಾಹವಾದರು. ಮದುವೆ ಸಮಾರಂಭಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಎಸ್ ಬೊಮ್ಮಾಯಿ, ನಟ ಗೋಲ್ಡನ್ ಸ್ಟಾರ್ ಗಣೇಶ್, ಪೂಜಾಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿ ದಂಪತಿಗೆ ಶುಭ ಹಾರೈಸಿದರು.

ಕೆಲ ವರ್ಷಗಳಿಂದ ಪ್ರೀತಿಯಲ್ಲಿದ್ದ ಹರ್ಷಿಕಾ ಹಾಗೂ ಭುವನ್ ಈಗ ಮದುವೆ ಮೂಲಕ ಒಂದಾಗಿದ್ದಾರೆ. ಕೊಡವ ಸಂಪ್ರದಾಯದಂತೆಯೇ ಮದುವೆಯ ಎಲ್ಲ ಶಾಸ್ತ್ರಗಳು ನಡೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com