ಕಾಟೇರ' ಚಿತ್ರದ ಮೊದಲ ಲಿರೀಕಲ್ ಸಾಂಗ್ 'ಪಸಂದಗವನೆ' ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ಅಭಿನಯದ ಬಹುನಿರೀಕ್ಷಿತ 'ಕಾಟೇರ' ಚಿತ್ರದ ಮೊದಲ ಲಿರೀಕಲ್ ಸಾಂಗ್ ಬಿಡುಗಡೆಯಾಗಿದೆ.  
ಕಾಟೇರ ಚಿತ್ರದ ಫೋಸ್ಟರ್
ಕಾಟೇರ ಚಿತ್ರದ ಫೋಸ್ಟರ್
Updated on

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ಅಭಿನಯದ ಬಹುನಿರೀಕ್ಷಿತ 'ಕಾಟೇರ' ಚಿತ್ರದ ಮೊದಲ ಲಿರೀಕಲ್ ಸಾಂಗ್ ಬಿಡುಗಡೆಯಾಗಿದೆ.  

ಈ ಚಿತ್ರದ 'ಪಸಂದಗವನೆ' ಹಾಡು ಯೂ ಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ದಾಸನ ಅಭಿಮಾನಿಗಳು ವಿಡಿಯೋ ವೀಕ್ಷಿಸಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಗಾಯಕಿ ಮಂಗ್ಲಿ ಹಾಡಿದ್ದಾರೆ. 

ತರುಣ್ ಸುಧೀರ್ ನಿರ್ದೇಶನದ ಕಾಟೇರ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಿಸಿದ್ದಾರೆ. ತೆಲುಗಿನ ಜಗಪತಿ ಬಾಬು, ಕನ್ನಡದ ಕುಮಾರ್ ಗೋವಿಂದ್ ಸೇರಿದಂತೆ ಮತ್ತಿತರರು ಪ್ರಮುಖ ಪಾತ್ರದಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com