ಗೋವಾದಲ್ಲಿ ರಮೇಶ್ ಅರವಿಂದ್ ಸೇರಿದಂತೆ ಕನ್ನಡ ಕಲಾವಿದರಿಗೆ ಅವಮಾನ: ಕ್ಷಮೆಯಾಚಿಸಿದ ಮೆಗಾಸ್ಟಾರ್ ಚಿರಂಜೀವಿ ಪಿಆರ್‌ಒ

ಮೆಗಾಸ್ಟಾರ್ ಚಿರಂಜೀವಿ ಪಿಆರ್‌ಒ ಸುರೇಶ್ ಕೊಂಡೇಟಿಯಿಂದ ಕನ್ನಡದ ಕಲಾವಿದರಿಗೆ ದೊಡ್ಡ ಅವಮಾನವಾಗಿದೆ. ಸಂತೋಷಂ ಅವಾರ್ಡ್ಸ್ (Santosham Awards 2023) ನೀಡಲು ಕನ್ನಡ ಸ್ಟಾರ್ಸ್‌ಗೆ ಗೋವಾಗೆ ಆಹ್ವಾನ ನೀಡಿದ್ದರು ಸುರೇಶ್‌.
ಸುರೇಶ್ ಕೊಂಡೇಟಿ
ಸುರೇಶ್ ಕೊಂಡೇಟಿ
Updated on

ಬೆಂಗಳೂರು: ಮೆಗಾಸ್ಟಾರ್ ಚಿರಂಜೀವಿ ಪಿಆರ್‌ಒ ಸುರೇಶ್ ಕೊಂಡೇಟಿಯಿಂದ ಕನ್ನಡದ ಕಲಾವಿದರಿಗೆ ದೊಡ್ಡ ಅವಮಾನವಾಗಿದೆ. ಸಂತೋಷಂ ಅವಾರ್ಡ್ಸ್ (Santosham Awards 2023) ನೀಡಲು ಕನ್ನಡ ಸ್ಟಾರ್ಸ್‌ಗೆ ಗೋವಾಗೆ ಆಹ್ವಾನ ನೀಡಿದ್ದರು ಸುರೇಶ್‌.

ಗೋವಾದಲ್ಲಿ ಬಂದಂತಹ ಅತಿಥಿಗಳಿಗೆ ಸರಿಯಾದ ಆತಿಥ್ಯ ನೀಡದೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕ್ರಾಂತಿ ಸಿನಿಮಾಗೆ ಅವಾರ್ಡ್ ನೀಡುತ್ತಿದ್ದಂತೆ ವೇದಿಕೆಯಲ್ಲಿ ಕರೆಂಟ್ ಆಫ್ ಕೂಡ ಆಗಿದ್ದು, ಆಯೋಜನೆಯಲ್ಲಿ ಮಹಾ ಎಡವಟ್ಟು ಸಂಭವಿಸಿದೆ.

ಕನ್ನಡಿಗರಿಗೆ ತೆಲುಗು ಆಯೋಜಕರಿಂದ ಈ ರೀತಿ ಮೋಸವಾಗಿರುವ ಕಾರಣಗಳಿಂದಾಗಿ ಕಾರ್ಯಕ್ರಮವನ್ನು ಬಾಯ್ಕಾಟ್ ಮಾಡಿ ಬೆಂಗಳೂರಿಗೆ ಕನ್ನಡದ ಸ್ಟಾರ್ಸ್‌ ತೆರಳಿದ್ದಾರೆ. ರಮೇಶ್ ಅರವಿಂದ್, ಸಪ್ತಮಿ ಗೌಡ, ರಾಜವರ್ಧನ್, ಬಿ ಸುರೇಶ್, ಶೈಲಜಾ ನಾಗ್ ಸೇರಿದಂತೆ ಸುಮಾರು 30ರಿಂದ 35 ಮಂದಿ ಕನ್ನಡದ ಸ್ಟಾರ್ಸ್‌ಗಳು ಭಾಗಿಯಾಗಿದ್ದರು ಎನ್ನಲಾಗಿದೆ.

ಗೋವಾದಲ್ಲಿ ನಡೆದ ಸಂತೋಷಂ ಅವಾರ್ಡ್ಸ್ ಫಂಕ್ಷನ್ ನಲ್ಲಿ ಕನ್ನಡ ತಾರೆಯರಿಗೆ ಅವಮಾನವಾಗಿದ್ದು, ಅಲ್ಲಿ ಆದಂತಹ ಎಡವಟ್ಟುಗಳಿಗೆ ಆಯೋಜಕ ಸುರೇಶ್ ಕೊಂಡೇಟಿ ಕ್ಷಮೆ ಕೇಳಿದ್ದಾರೆ‌. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 1,200 ಮಂದಿ ಸೆಲೆಬ್ರಿಟೀಸ್​ಗೆ ಸ್ ಗೆ ಆತಿಥ್ಯ ನೀಡೋದ್ರಲ್ಲಿ ಏರುಪೇರಾಗಿದೆ. ಇದು ಉದ್ದೇಶಪೂರ್ವಕವಾಗಿ ಆಗಿರೋದಲ್ಲ. ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ನನಗೆ ನಾಲ್ಕು ಚಿತ್ರರಂಗದ ತಾರೆಯರೆಲ್ಲಾ ಒಂದೇ. ಅದರಲ್ಲಿ ಯಾವುದೇ ತಾರತಮ್ಯ ಇಲ್ಲ. ಕಂಪ್ಲೀಟ್ ಆಗಿ ಇದು ನಾನೊಬ್ಬನೇ ನೀಡ್ತಾ ಬರ್ತಿರೋ ಪ್ರಶಸ್ತಿ ಪ್ರದಾನ ಸಮಾರಂಭ.‌ಇದಕ್ಕೂ ತೆಲುಗು ಚಿತ್ರರಂಗಕ್ಕೂ ಸಂಬಂಧವಿಲ್ಲ. ನನ್ನಿಂದ ತೊಂದರೆಗೊಳಗಾದ ಪ್ರತಿಯೊಬ್ಬರಿಗೂ ಕ್ಷಮೆಯಾಚಿಸುತ್ತೇನೆ ಎಂದು ಸುರೇಶ್ ಕೊಂಡೇಟಿ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com